ಬೆಂಗಳೂರು : ರಾಜ್ಯದ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ನಮ್ಮ ರಾಜ್ಯದ ನಾಡಗೀತೆಯನ್ನೂ ಹಾಕುವಂತೆ ಮಾಜಿ ಸಚಿವ ಜಮೀರ್ ಖಾನ್ ಪುತ್ರ ಮತ್ತು ನಟ ಝೈದ್ ಖಾನ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ : ಈ ಹೆಸರಿನವರು ಜೀವನದಲ್ಲಿ ಖ್ಯಾತಿ ಗಳಿಸುತ್ತಾರೆ, ಇದ್ದಕ್ಕಿದ್ದಂತೆ ಅದೃಷ್ಟ ಹೊಳೆಯುತ್ತದೆ!
ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ ಪೀಳಿಗೆಯ ಹೃದಯದೊಳಗೆ ಇಳಿಯಬೇಕು. ಹಾಗಾಗಿ ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಝೈದ್ ಖಾನ್ ಮಾಹಿತಿ ನೀಡಿದರು.
ಇದೇ ವೇಳೆ ಇತ್ತೀಚೆಗೆ ರಿಲೀಸ್ ಆದ ಪ್ಯಾನ್ ಇಂಡಿಯಾ ಸಿನಿಮಾ ಬನಾರಸ್ ಬೈಕಾಟ್ ಮಾಡುವ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಝೈದ್ ಖಾನ್, ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಶ್ರಮಿಸಿದ್ದೇನೆ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ. ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದರು.
ಇದನ್ನೂ ಓದಿ : ಇನ್ನು ಮುಂದೆ ಈ ನಂಬರ್ ಇಲ್ಲ ಎಂದಾದರೆ ಎಟಿಎಂ ನಿಂದ ಹಣ ತೆಗೆಯುವುದು ಸಾಧ್ಯವೇ ಇಲ್ಲ .!
ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರಿಗೆ ಸಾಥ್ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.