ನಟಿ ಚೇತನಾ ರಾಜ್ ಸಾವು ಪ್ರಕರಣ: ಶೆಟ್ಟೀಸ್ ಆಸ್ಪತ್ರೆಗೆ ಬೀಗ ಜಡಿದ ಆರೋಗ್ಯ ಇಲಾಖೆ
ಕಿರುತೆರೆ ನಟಿ ಚೇತನಾ ರಾವ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ನೀಡಿದ್ದ ಖಾಸಗೀ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಬೆಂಗಳೂರು: ಕಿರುತೆರೆ ನಟಿ ಚೇತನಾ ರಾವ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ನೀಡಿದ್ದ ಖಾಸಗೀ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೀಡಲಾಗಿದ್ದು, ಚೇತನಾ ರವರ ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆರೋಗ್ಯ ಇಲಾಖೆ ವತಿಯಿಂದ ಡಾ. ಶೆಟ್ಟಿಗೆ ನೋಟೀಸ್ ಕೊಟ್ಟು ಆಸ್ಪತ್ರೆಯನ್ನ ಬಂದ್ ಮಾಡಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆ DHO ರಿಂದ ಶೆಟ್ಟೀಸ್ ಆಸ್ಪತ್ರೆಗೆ ಬೀಗ ಹಾಕಲಾಗಿದೆ.ನೋಟೀಸ್ ನೀಡಿದ 24 ಗಂಟೆಯೊಳಗೆ ಉತ್ತರಿಸುವಂತೆ ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.ಇಲ್ಲದಿದ್ದರೆ ಕಾನೂನು ರೀತಿ ಕ್ರಮಕ್ಕೆ ಮುಂದಾಗಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : Railway Employee : ರೈಲ್ವೆ ನೌಕರರಿಗೆ ಸಿಹಿ ಸುದ್ದಿ : 14% ರಷ್ಟು DA ಹೆಚ್ಚಿಸಿದ ಕೇಂದ್ರ ಸರ್ಕಾರ!
ಇನ್ನು ಮಗಳ ಸಂಶಯಾಸ್ಪದ ಸಾವಿನ ಕುರಿತು ಚೇತನಾಳ ತಂದೆ ವರದರಾಜ್ ನೀಡಿರುವ ದೂರಿನ ಅನ್ವಯ ಸಾವಿನ ರಹಸ್ಯ ಭೇದಿಸಲು ಮುಂದಾಗಿದ್ದ ಸುಬ್ರಹ್ಮಣ್ಯ ನಗರ ಪೊಲೀಸರು, ಆಸ್ಪತ್ರೆಯ ಶೆಟ್ಟಿ, ಸೇರಿದಂತೆ ನಾಲ್ವರ ವಿರುದ್ದ ನೋಟಿಸ್ ಜಾರಿಗೊಳಿಸಲಾಗಿತ್ತು.ಅಲ್ಲದೆ ಇಂದು ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಲಾಗಿತ್ತು.
‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ನಟಿ ಚೇತನಾರಾಜ್ ಖಾಸಗೀ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಬೆಂಗಳೂರಿನ ಅಬ್ಬಿಗೆರೆಯಲ್ಲಿ ವಾಸವಿರುವ ನಟಿಯ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ತಮ್ಮ ಪುತ್ರಿ ಸಾವನ್ನಪ್ಪಿದ್ದಾಳೆ ಎಂದು ಆರೋಪ ಮಾಡಿದ್ದರು.ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ಶೇಖರಣೆಯಾಗಿ ಸಾವು ಸಂಭವಿಸಿದೆ ಎಂದು ದೂರಿನಲ್ಲಿ ಹೇಳಲಾಗಿತ್ತು. ಹೀಗಾಗಿ ದೂರು ದಾಖಲಿಸಿಕೊಂಡಿದ್ದ ಸುಬ್ರಹ್ಮಣ್ಯ ನಗರ ಪೊಲೀಸರು ಇಂದು ಆಸ್ಪತ್ರೆಯ ವೈದ್ಯ ಶೆಟ್ಟಿ ಸೇರಿದಂತೆ ಇತರೆ ನಾಲ್ಕು ಸಿಬ್ಬಂದಿಗಳನ್ನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.