ಆಸ್ಪತ್ರೆಯ ಬೆಡ್ ಮೇಲೆ ಕದಲದ ಸ್ಥಿತಿಯಲ್ಲಿ ಮೌನಿ ರಾಯ್..! `ಬ್ರಹ್ಮಾಸ್ತ್ರ` ಸುಂದರಿಗೆ ಏನಾಯ್ತು..?
Mouni Roy : ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮೌನಿ ರಾಯ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಒಂಬತ್ತು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟಿ ಇತ್ತೀಚೆಗೆ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Mouni Roy health updates : ಬಾಲಿವುಡ್ ಬೆಡಗಿ ಮೌನಿ ರಾಯ್ ಬಗ್ಗೆ ಬಹುತೇಕ ಎಲ್ಲರಿಗೂ ಗೊತ್ತು. ಧಾರಾವಾಹಿಗಳ ಮೂಲಕ ಇಂಡಸ್ಟ್ರಿಗೆ ಕಾಲಿಟ್ಟ ಈ ಚೆಲುವೆ ಹಲವು ಧಾರಾವಾಹಿಗಳಲ್ಲಿ ನಟಿಸಿ ಸಿನಿ ಪ್ರೇಕ್ಷಕರ ಮನಗೆದ್ದಿದ್ದಾರೆ. ಅದರಲ್ಲೂ ‘ನಾಗಿನ್’ ಧಾರಾವಾಹಿಯಲ್ಲಿ ನಟಿಸಿ ಒಳ್ಳೆಯ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ. ನಂತರ ಸಿನಿಮಾ ಅವಕಾಶಗಳೂ ಬಂದವು.
ಮೌನಿ ರಾಯ್ ಕಳೆದ ವರ್ಷ ತೆರೆಕಂಡ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲೂ ಮುಖ್ಯ ಖಳನಾಯಕಿಯಾಗಿ ನಟಿಸಿ ಖ್ಯಾತಿ ಗಳಿಸಿದ್ದರು. ಇತ್ತೀಚೆಗಷ್ಟೇ ಈ ಸುಂದರಿಯ ಕುರಿತಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ವೈರಲ್ ಆದ ನಂತರ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಮೌನಿ ಏನಾಯಿತು ಎಂದು ಕೇಳುತ್ತಿದ್ದಾರೆ.
ಇದನ್ನೂ ಓದಿ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿದೆ ವರ್ಲ್ಡ್ ಪ್ರೀಮಿಯರ್ ಮೂವಿ "ರಾಘವೇಂದ್ರ ಸ್ಟೋರ್ಸ್"..!
ಸಿನಿಮಾ ತಾರೆಯರ ವೈಯಕ್ತಿಕ ವಿಚಾರಗಳು ತಿಳಿಯಲು ಅವರ ಅಭಿಮಾನಿಗಳಿಗೆ ಯಾವಾಗಲೂ ಆಸಕ್ತಿ ಇರುತ್ತದೆ. ಅವರಿಗೆ ಸಂಬಂಧಿಸಿದ ವಿಷಯಗಳು ಹೊರಬಂದರೆ, ಅಭಿಮಾನಿಗಳು ಹೆಚ್ಚು ಪ್ರತಿಕ್ರಿಯಿಸುತ್ತಾರೆ. ಇತ್ತೀಚೆಗಷ್ಟೇ ಮೌನಿ ರಾಯ್ ಗೆ ಸಂಬಂಧಿಸಿದ ಸುದ್ದಿಯೊಂದು ಹೊರಬಿದ್ದಿದ್ದು, ಆಕೆಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚೆಗೆ ಬಾಲಿವುಡ್ ಬೆಡಗಿ ಮೌನಿ ರಾಯ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೌನಿ ರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯವಿದೆ. ಅದರೊಂದಿಗೆ ಡಿಸ್ಚಾರ್ಜ್ ಆದ ಬಳಿಕ ಮನೆಗೆ ಹೋಗುತ್ತಿರುವ ಫೋಟೋವನ್ನೂ ಹಂಚಿಕೊಂಡಿದ್ದಾಳೆ. ಆಸ್ಪತ್ರೆಯಲ್ಲಿದ್ದ ಕೆಲ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.\
ಇದನ್ನೂ ಓದಿ: ಛಾಯಾಗ್ರಾಹಕನ ಜೊತೆಗೂ ಕಾಂಪ್ರಮೈಸ್ ಮಾಡಿಕೊಳ್ಬೇಕು..ಸೌತ್ ಸಿನಿದುನಿಯಾದ ಕರಾಳ ಮುಖ ತೆರೆದಿಟ್ಟ ನಟಿ
ನಾನು 9 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದೆ. ಯಾವತ್ತೂ ಅಷ್ಟು ನಿಶ್ಚಲವಾಗಿರಲಿಲ್ಲ. ಆದರೆ ಈಗ ನಾನು ಚೇತರಿಸಿಕೊಂಡಿದ್ದೇನೆ. ಈಗ ನನಗೆ ತುಂಬಾ ಖುಷಿಯಾಗಿದೆ. ನನ್ನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ನನ್ನ ಆತ್ಮೀಯ ಸ್ನೇಹಿತರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಮೌನಿ ರಾಯ್ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಮೌನಿ ರಾಯ್ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಕೆಲ ದಿನಗಳ ಹಿಂದೆ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂಬತ್ತು ದಿನಗಳ ಚಿಕಿತ್ಸೆಯ ನಂತರ ಮನೆಗೆ ಮರಳಿದ್ದಾಗಿ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.