ಬೆಂಗಳೂರು : ಚಿನ್ನ ಸ್ಮಗ್ಲಿಂಗ್ ಕೇಸಲ್ಲಿ ಅಂದರ್ ಆಗಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೇಸ್ ಗೆ ಇಡಿ ಅಧಿಕಾರಿಗಳು ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದು,ರನ್ಯಾ ಮನೆ ಸೇರಿ ಆಕೆಯ ಆಪ್ತರ ಮನೆ, ಕಚೇರಿಗಳಲ್ಲಿ ತಲಾಶ್ ನಡೆಸಿದ್ದಾರೆ.
ರನ್ಯಾರಾವ್ ವಾಸಿಸುತ್ತಿದ್ದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್, ಕೋರಮಂಗಲದಲ್ಲಿರುವ ರನ್ಯಾ ಪತಿ ಜತಿನ್ ಮನೆ, ಡಿಆರ್ಐ ವಶದಲ್ಲಿರುವ ರನ್ಯಾ ಗೆಳೆಯ ತರುಣ್ ನಿವಾಸ, ಜಯನಗರ, ಬಸವನಗುಡಿ ಸೇರಿ ಒಟ್ಟು ಆರು ಕಡೆ ನಡೆಸಿದ್ದಾರೆ.
ಇದನ್ನೂ ಓದಿ:ನೀವು ಕನ್ಯೆಯೇ..?.. ಕಿಡಿಗೇಡಿ ಪ್ರಶ್ನೆಗೆ ಮುಟ್ಟಿ ನೋಡಿಕೊಳ್ಳುವಂತೆ ಪ್ರತಿಕ್ರಿಯೆ ನೀಡಿದ ಕನ್ನಡ ಸಿನಿಮಾ ನಟಿ.. ಉತ್ತರವೇನಿತ್ತು ಗೊತ್ತೆ..?
ಬೆಳಗ್ಗೆ ಆರು ಗಂಟೆ ಸುಮಾರಿಗೆ ಎಂಟ್ರಿ ಕೊಟ್ಟಿದ್ದ ಅಧಿಕಾರಿಗಳು ರನ್ಯಾರಾವ್ ವಿಮಾನದ ಟಿಕೆಟ್ ಬುಕ್ ಮಾಡಿದವರು ಮತ್ತು ವಿದೇಶ ಪ್ರವಾಸಕ್ಕೆ ನೆರವು ನೀಡಿದವರು ಮತ್ತು ವ್ಯವಹಾರದಲ್ಲಿ ಪಾಲುದಾರರಾಗಿರುವವರಿಗೆ ಶಾಕ್ ಕೊಟ್ಟಿದ್ದಾರೆ. ಈಗಾಗಲೇ ರನ್ಯಾಳನ್ನು ಬಂಧಿಸಿ ವಿಚಾರಣೆ ನಡೆಸಿರುವ ಡಿಆರ್‌ಐ ಕೆಲವು ಮಾಹಿತಿಯನ್ನು ಕಲೆ ಹಾಕಿತ್ತು. ನಂತರ ಸಿಬಿಐ ಕೂಡ ಪ್ರತ್ಯೇಕವಾಗಿ ತನಿಖೆ ಕೈಗೊಂಡಿದೆ. ಈಗ ಇಡಿ ಕೂಡ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣದ ವ್ಯವಹಾರ ನಡೆದಿರುವ ಅನುಮಾನವಿದೆ. ಈ ಹಿಂದೆ ಡಿಆರ್ ಐ ಅಧಿಕಾರಿಗಳು ರನ್ಯಾ ಮನೆ ಮೇಲೆ ದಾಳಿ ನಡೆಸಿದಾಗ ಚಿನ್ನ ಹಾಗೂ 2 ಕೋಟಿಗೂ ಅಧಿಕ ಲಿಕ್ವಿಡ್ ಕ್ಯಾಶ್ ಸಿಕ್ಕಿತ್ತು. ರೂಲ್ಸ್ ಪ್ರಕಾರ 2 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಯಾರು ಮನೆಯಲ್ಲಿ ಇಟ್ಟುಕೊಳ್ಳುವಂತಿಲ್ಲ. ಅದಾಗ್ಯೂ ರನ್ಯಾ ಮನೆಯಲ್ಲಿ ಪತ್ತೆಯಾಗಿರುವ ಹಣ ಚಿನ್ನ ಕಳ್ಳಸಾಗಣೆ ಮಾಡಲು ಹೊಂದಿಸಿಟ್ಟಿದ್ದ ಹಣ ಎಂದು ಶಂಕಿಸಲಾಗಿದೆ. ಹೀಗಾಗಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ದಾಳಿ ನಡೆಸಿದ ತಲಾಶ್ ನಡೆಸಿದೆ. 12 ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಕೆಲವರಿಗೆ ನಡುಕ ಶುರುವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ನಟಿ ಶ್ರೀದೇವಿಯವರ ತಂಗಿ ಯಾರ್ ಗೊತ್ತೆ..? ಸೌಂದರ್ಯದಲ್ಲಿ ಅಕ್ಕನಿಗಿಂತಲೂ ಒಂದು ಹೆಜ್ಜೆ ಮುಂದೆ ಈಕೆ
ಇನ್ನು ಸ್ಮಗ್ಲಿಂಗ್ ಕೇಸಲ್ಲಿ ಕಿಂಗ್ ಪಿನ್ ಎನ್ನಲಾಗುತ್ತಿರುವ ಆರೋಪಿ ತರುಣ್ ರಾಜ್ ನ ಹಿನ್ನೆಲೆ ಗೊತ್ತಾಗಿದೆ. ರನ್ಯಾ ಆಪ್ತ ಸ್ನೇಹಿತನಾಗಿದ್ದ ತರುಣ್ ರಾಜ್ ತೆಲುಗು ಸಿನಿಮಾದಲ್ಲಿ ಸಕ್ರಿಯವಾಗಿದ್ದ. ಮೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿರೋ ತರುಣ್ ರಾಜ್, ಸಿನಿಮಾಗೆಂದು ತನ್ನ ಹೆಸ್ರನ್ನ ವಿರಾಟ್ ಕೊಂಡೂರು ರಾಜ್ ಅಂತಾ ಬದಲಾಯಿಸಿಕೊಂಡಿದ್ದ.
2018 ರಲ್ಲಿ ಪರಿಚಯಂ ಎಂಬ ಸಿನಿಮಾದಲ್ಲಿ ನಾಯಕನಟನಾಗಿ ಅಭಿನಯಿಸಿದ್ದ. ಸಿನಿಮಾ ಮೂಲಕವೇ ನಟಿ ರನ್ಯಾ ಜೊತೆ ಸ್ನೇಹ ಬೆಳೆಸಿರುವ ಮಾಹಿತಿ ಲಭ್ಯವಾಗಿದ್ದು, ಆ ಬಳಿಕ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಸಿಂಡಿಕೇಟ್ ನಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ಕಡೆ ಚಿತ್ರರಂಗದ ಕೆಲ ನಟಿಯರನ್ನು ಈತ ಸ್ಮಗ್ಲಿಂಗ್ ಗಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದ್ದು, ದುಬೈನಲ್ಲಿ ಅತೀ ಹೆಚ್ಚು ಕಾಂಟ್ಯಾಕ್ಟ್ ಈತನಿಗಿದೆಯಂತೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









