ದೇಹದಲ್ಲಿ 14 ಕೆಜಿ ಚಿನ್ನ ಬಚ್ಚಿಟ್ಟುಕೊಂಡಿದ್ದ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಯಾರು ಗೊತ್ತಾ...?

Actress Ranya Rao: ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಅವರಿಂದ ಬರೋಬ್ಬರಿ 12 ಕೋಟಿ ರೂ. ಮೌಲ್ಯದ, 14.8 ಕೆ.ಜಿ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. 

Written by - Yashaswini V | Last Updated : Mar 5, 2025, 03:38 PM IST
  • ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರಾನ್ಯ ಬಂಧನ ಪ್ರಕರಣ
  • ರಾನ್ಯ ಮನೆಯಲ್ಲಿ ಕೋಟಿ-ಕೋಟಿ ಹಣ, ಕೆಜಿಗಟಗಟ್ಟಲೇ ಚಿನ್ನ ಸೀಜ್
  • ಅಪಾರ ಪ್ರಮಾಣದ ಹಣ, ಚಿನ್ನ ಪತ್ತೆಯಾದ ಹಿನ್ನೆಲೆ ಐಟಿ, ಇಡಿ ಎಂಟ್ರಿ ಫಿಕ್ಸ್
ದೇಹದಲ್ಲಿ 14 ಕೆಜಿ ಚಿನ್ನ ಬಚ್ಚಿಟ್ಟುಕೊಂಡಿದ್ದ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಯಾರು ಗೊತ್ತಾ...?

Ranya Rao News: ಸದ್ಯ ದೇಶಾದ್ಯಂತ ಸಖತ್ ಸದ್ದು ಮಾಡುತ್ತಿರುವ ಹೆಸರು ಕನ್ನಡ ನಟಿ ರನ್ಯಾ ರಾವ್. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಚಿತ್ರದ ನಾಯಕಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಪೊಲೀಸರು ಬಂಧಿಸಿದ್ದಾರೆ. 

Add Zee News as a Preferred Source

ಕಳೆದ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ 33 ವರ್ಷದ ನಟಿ ರನ್ಯಾ ರಾವ್ ಆಗಾಗ್ಗೆ ಅಂತರಾಷ್ಟ್ರೀಯ ಪ್ರಯಾಣ ಕೈಗೊಳ್ಳುತ್ತಿದ್ದರು. ವರ್ಷದಲ್ಲಿ ಸುಮಾರು 40ಬಾರಿ ದುಬೈಗೆ ಹಾರಿದ್ದ ಬಂಗಾರದ ಬೆಡಗಿಯ ಮೇಲೆ ಅನುಮಾನಗೊಂಡು ಹದ್ದಿನ ಕಣ್ಣಿಟ್ಟಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯ- ಡಿ‌ಆರ್‌ಐ ಮಾರ್ಚ್ 03, 2025ರಂದು ದುಬೈನಿಂದ ಎಮಿರೇಟ್ಸ್ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದ ನಟಿಯನ್ನು ಪರಿಶೀಲಿಸಿದ ವೇಳೆ ಆಕೆ ದೇಹದಲ್ಲಿ ಬರೋಬ್ಬರಿ 12 ಕೋಟಿ ರೂ. ಮೌಲ್ಯದ 14.8ಕೆಜಿ   ಚಿನ್ನವನ್ನು ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಆಕೆಯನ್ನು ಬಂಧಿಸಿದ್ದು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದಾರೆ. 

ಕೇವಲ ಗೋಲ್ಡ್ ಸೀಜ್ ಮಾಡಿ ಸುಮ್ಮನಾಗದ ಡಿ‌ಆರ್‌ಐ ಅಧಿಕಾರಿಗಳು ನಟಿ ರನ್ಯಾ ಅವರ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಷನ್ ಹೌಸ್ ನ ಫ್ಲ್ಯಾಟ್ ಮೇಲೆ ರೆಡ್ ಮಾಡಿದ್ದು 2.5ಕೋಟಿ ನಗದು ಹಾಗೂ ಕೆಜಿಗಟ್ಟಲೆ ಚಿನ್ನವನ್ನು ಸಹ ಮುಟ್ಟುಗೋಲು ಹಾಕಿಕೊಂಡಿದ್ದಾರೆ. 

ಇದನ್ನೂ ಓದಿ- ಸುಂದರವಾಗಿ ಕಾಣಲು 29 ಸರ್ಜರಿ ಮಾಡಿಸಿಕೊಂಡಿದ್ದ ನಟಿ ಶ್ರೀದೇವಿ! ಅವರು ತೆಗೆದುಕೊಂಡ ಅದೊಂದು ನಿರ್ಧಾರ ಅವರ ಸಾವಿಗೆ ಕಾರಣವಾಯ್ತಾ..?

ನಟಿ ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ಹಣ, ಚಿನ್ನ ಪತ್ತೆಯಾಗಿರುವ ಹಿನ್ನಲೆಯಲ್ಲಿ ಹಣದ ಮೂಲ ಪತ್ತೆ ಹಚ್ಚುವಂತೆ ಡಿಆರ್‌ಐ ಅಧಿಕಾರಿಗಳು ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆಯಲಿದ್ದಾರೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ನಟಿಗೆ ಐಟಿ, ಇಡಿ ಸಂಕಷ್ಟ ಎದುರಾಗುವ ಸಾಧ್ಯತೆಯೂ ಇದೆ.  

ಇದನ್ನೂ ಓದಿ- ಸಿರೀಯಲ್‌ನಲ್ಲಿ ಅತ್ತೆ-ಅಳಿಯನಾಗಿ ನಟಿಸಿ ರಿಯಲ್‌ ಲೈಫ್‌ನಲ್ಲಿ ಗಂಡ ಹೆಂಡತಿಯಾದ ಸ್ಟಾರ್‌ ಸೆಲೆಬ್ರಿಟಿ ಜೋಡಿ!

ಯಾರೀ ರನ್ಯಾ ರಾವ್..!
ರನ್ಯಾ ರಾವ್ ಕನ್ನಡ ನಟಿ ಮತ್ತು ರೂಪದರ್ಶಿ. ಐಪಿಎಸ್ ಅಧಿಕಾರಿಯೊಬ್ಬರ ಮಲಮಗಳು.  ಈಕೆಯ ಗಂಡ ಹೆಸರಾಂತ ಅರ್ಕಿಟೆಕ್ಟ್. 

ಕೇವಲ ಮೂರು ಚಿತ್ರಗಳಲ್ಲಿ ಅಭಿನಯಿಸಿರುವ ರನ್ಯಾ ರಾವ್... 
ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಸಿನಿಮಾ ಮೂಲಕ 2014ರಲ್ಲಿ ಸಿನಿ ಜಗತ್ತಿಗೆ ಪದಾರ್ಪಣೆ ಮಾಡಿದ ರನ್ಯಾ ರಾವ್,  ಬಳಿಕ ಮತ್ತೆರಡು ಸಿನಿಮಾಗಳಲ್ಲಿಯೂ ಬಣ್ಣ ಹಚ್ಚಿದರಾದರೂ ನಟಿಯಾಗಿ ಯಶಸ್ವಿ ಆಗಲಿಲ್ಲ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News