ಮದುವೆಯಾಗಿ ಮಕ್ಕಳಿರುವ ಪ್ರಖ್ಯಾತ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್!?‌ ಅಷ್ಟಕ್ಕೂ ಯಾರು ಆತ?

Sai Pallavi is dating With famous actor: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಸಾಯಿ ಪಲ್ಲವಿ ಕೂಡ ಒಬ್ಬರು. ಸಿನಿಮಾಗಳಿಗಿಂತ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹವಾ ಸೃಷ್ಟಿಸುತ್ತಿದ್ದಾರೆ.    

Written by - Savita M B | Last Updated : Mar 5, 2025, 05:00 PM IST
  • ಮೊದಲ ಸಿನಿಮಾದಿಂದಲೇ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಒಳ್ಳೆಯ ಹೆಸರು ಗಳಿಸಿರುವ ಸಾಯಿ ಪಲ್ಲವಿ
  • ತನಗೊಂದು ವಿಶಿಷ್ಟ ಇಮೇಜ್ ಕ್ರಿಯೇಟ್ ಮಾಡಿಕೊಂಡಿದ್ದಾರೆ
ಮದುವೆಯಾಗಿ ಮಕ್ಕಳಿರುವ ಪ್ರಖ್ಯಾತ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್!?‌ ಅಷ್ಟಕ್ಕೂ ಯಾರು ಆತ?

Sai Pallavi: ಮೊದಲ ಸಿನಿಮಾದಿಂದಲೇ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಒಳ್ಳೆಯ ಹೆಸರು ಗಳಿಸಿರುವ ಸಾಯಿ ಪಲ್ಲವಿ, ಉತ್ತಮ ಕಂಟೆಂಟ್‌ ಸಿನಿಮಾಗಳನ್ನು ಆಯ್ದುಕೊಂಡು ಚಿತ್ರರಂಗದಲ್ಲಿ ತನಗೊಂದು ವಿಶಿಷ್ಟ ಇಮೇಜ್ ಕ್ರಿಯೇಟ್ ಮಾಡಿಕೊಂಡಿದ್ದಾರೆ. ತನ್ನ ಚೊಚ್ಚಲ ತೆಲುಗು ಚಿತ್ರ ಫಿದಾದಿಂದ ಇತ್ತೀಚೆಗೆ ಬಿಡುಗಡೆಯಾದ ವಿರಾಟಪರ್ವಂ ವರೆಗೆ ಎಲ್ಲಾ ವಿಭಿನ್ನ ಪಾತ್ರಗಳಲ್ಲಿ ನಟಿಸುವ ಮೂಲಕ ತನ್ನ ಅಭಿಮಾನಿಗಳನ್ನು ರಂಜಿಸುತ್ತಾಳೆ.

Add Zee News as a Preferred Source

ಸಾಯಿ ಪಲ್ಲವಿ ಡಾನ್ಸ್‌ಗೆ ವಿಶೇಷವಾದ ಅಭಿಮಾನಿಗಳ ಬಳಗವೇ ಇದೆ.. ಇವರು ತೆಲುಗು, ತಮಿಳು ಭಾಷೆಗಳಲ್ಲಿ ಸಿನಿಮಾ ಮಾಡುವ ಮೂಲಕ ಅತ್ಯಂತ ಪ್ರತಿಭಾವಂತ ನಾಯಕಿ ಎಂದು ಗುರುತಿಸಿಕೊಂಡರು. ಸಾಯಿ ಪಲ್ಲವಿ ಅವರಿಗೆ ಕಥೆ ಇಷ್ಟವಾದರೆ ಮತ್ತು ಅದರಲ್ಲಿ ತಮ್ಮ ಪಾತ್ರಕ್ಕೆ ಮಹತ್ವವಿದ್ದರೆ ಮಾತ್ರ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಾರೆ ಎಂಬ ಮಾತು ಇಂಡಸ್ಟ್ರಿಯಲ್ಲಿ ಇದೆ. ಸಾಯಿ ಪಲ್ಲವಿ ಎಲ್ಲೆ ಮೀರಿದ ಪಾತ್ರಗಳಿಂದ ದೂರವಿರುತ್ತಾರೆ.. ಇದೇ ಸಾಯಿ ಪಲ್ಲವಿಯನ್ನು ಇಂಡಸ್ಟ್ರಿಯಲ್ಲಿ ವಿಶೇಷ ಸ್ಥಾನದಲ್ಲಿರಿಸಿತು..

ಇದನ್ನೂ ಓದಿ : ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ‘ತಂದೆಗೆ ತಕ್ಕ ಮಗ’ ಸಿನಿಮಾ ನಟಿ ಲೈಲಾ!

 ನಟಿಯರ ಪೈಕಿ ಸಾಯಿ ಪಲ್ಲವಿ ವಿಶೇಷ ಕ್ರೇಜ್ ಪಡೆದುಕೊಂಡಿದ್ದಾರೆ. ಈ ನಡುವೆ ಸಾಯಿ ಪಲ್ಲವಿಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗಿದೆ. ನಟಿ ವಿವಾಹಿತ ನಾಯಕನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಅದೂ ಅಲ್ಲದೆ ನಾಯಕನಿಗೆ ಮದುವೆಯಾಗಿ ಮಕ್ಕಳಿದ್ದಾರೆ. ಈ ಸುದ್ದಿ ಸಾಯಿ ಪಲ್ಲವಿ ಅಭಿಮಾನಿಗಳಿಗೆ ಶಾಕ್‌ ನೀಡಿದೆ.. 

 ಆದರೆ ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅಭಿಮಾನಿಗಳು ಸುಮ್ಮನಾಗಿದ್ದಾರೆ.. ಅಲ್ಲದೇ ಯಾರೋ ತಮಗೆ ಬೇಕಾದ್ದಕ್ಕೆ ವದಂತಿ ಸೃಷ್ಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.. ಸಾಯಿ ಪಲ್ಲವಿ ವೃತ್ತಿಜೀವನದ ವಿಷಯಕ್ಕೆ ಬಂದರೆ, ಬಾಲಿವುಡ್‌ನಲ್ಲಿ 'ರಾಮಾಯಣ' ಚಿತ್ರದಲ್ಲಿ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ ನಾಗ ಚೈತನ್ಯ ಜೊತೆ ತೆಲುಗಿನ ‘ತಾಂಡೇಲ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.  

ಇದನ್ನೂ ಓದಿ : ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ‘ತಂದೆಗೆ ತಕ್ಕ ಮಗ’ ಸಿನಿಮಾ ನಟಿ ಲೈಲಾ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Savita M B

ಸವಿತಾ ಎಂ.ಬಿ ಅವರು ZEE ಕನ್ನಡ ನ್ಯೂಸ್‌ ಡಿಜಿಟಲ್‌ನಲ್ಲಿ ಸಬ್‌ ಎಡಿಟರ್‌ ಆಗಿ ಕೆಲಸ ಮಾಡುತ್ತಿದ್ದು, ಎಂಟರ್‌ಟೈನ್‌ಮೆಂಟ್, ಹೆಲ್ತ್‌, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. 2023ರಿಂದ ಇವರು ವಾಹಿನಿಗಾಗಿ ಶ್ರಮಿಸುತ್ತಿದ್ದಾರೆ.

...Read More

Trending News