ಬೆಂಗಳೂರು:  ಚಂದನವನದಲ್ಲಿ ಈಗ ಮೀಟೂ ಸದ್ದು ಭಾರಿ ಸಂಚಲವನ್ನೇ ಸೃಷ್ಟಿಸಿದೆ.ಬಾಲಿವುಡ್ ನ ತನುಶ್ರೀ ದತ್ತರಿಂದ ಪ್ರಾರಂಭವಾದ ಈ ಅಭಿಯಾನ ಈಗ ಕನ್ನಡದಲ್ಲಿಯೂ ಕೂಡ ಕಾಲಿಟ್ಟಿದೆ. ಅದರ ಭಾಗವಾಗಿ ಶ್ರುತಿ ಹರಿಹರನ್ ಈಗ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ದ ಈಗ ಮೀಟೂ ಆರೋಪ ಮಾಡಿದ್ದಾರೆ.ಖಾಸಗಿ ನಿಯತಕಾಲಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಮುಖವಾಗಿ ಈಗ ಅರ್ಜುನ್ ಸರ್ಜಾ ವಿರುದ್ದ ಮಾಡಿರುವ ಆರೋಪ ವಿಸ್ಮಯ ಸಿನಿಮಾದಲ್ಲಿ ನಟಿಸುತ್ತಿದ್ದ ವೇಳೆ ತಮಗೆ ಆಗಿದೆ ಎಂದು ಶ್ರುತಿ ಹರಿಹರನ್ ಹೇಳಿದ್ದಾರೆ. "ತಾವು ಹಲವಾರು ನಟರ ಜೊತೆ ನಟಿಸಿದ್ದಾಗ ತಮಗೆ ಯಾವುದೇ ರೀತಿ ಸಮಸ್ಯೆಯಾಗಿರಲಿಲ್ಲ, ಆದರೆ ವಿಸ್ಮಯ ಚಿತ್ರದಲ್ಲಿ ನಟಿಸುವ ಸಂದರ್ಭದಲ್ಲಿ ತಮ್ಮ ಜೊತೆ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದ್ದರು ಎಂದು  ಆರೋಪ ಮಾಡಿದ್ದಾರೆ.


ಶ್ರುತಿ ಹೇಳುವಂತೆ " ವಿಸ್ಮಯ ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ,ಆಗ ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಎಂದು ಶೃತಿ ಹರಿಹರನ್ ಹೇಳಿದ್ದಾರೆ.


ಇನ್ನು ಮುಂದುವರೆದು ಈ ಘಟನೆ ಆದ ಬಳಿಕವು ಸಹಿತ ಅರ್ಜುನ್ ಸರ್ಜಾ ತಮ್ಮ ಮಾತನ್ನು ಅರ್ಥ ಮಾಡಿಕೊಂಡಿರಲಿಲ್ಲ ತಮ್ಮನ್ನು ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಪ್ರಾರಂಭಿಸಿದ್ದರು . ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಎಂದು  ಶ್ರುತಿ ಹರಿಹರನ್  ತಮಗಾದ ಲೈಂಗಿಕ ಕಿರುಕುಳದ ಅನುಭವವನ್ನು ಅವರು  ಬಿಚ್ಚಿಟ್ಟಿದ್ದಾರೆ.