ಸ್ಯಾಂಡಲ್‌ವುಡ್‌ನಲ್ಲೂ ಲೈಂಗಿಕ ಕಿರುಕುಳದ ಬಗ್ಗೆ ಸಮೀಕ್ಷೆ ಆಗಬೇಕು..! ನಟಿ ಶ್ರುತಿ ಹರಿಹರನ್ 

Sruthi Hariharan : ಮಲಯಾಳಂ ಸಿನಿರಂಗದಲ್ಲಿ ಕಾಸ್ಟಿಂಗ್‌ ಕೌಚ್‌ ವಿಚಾರ ಹೇಮಾ ಸಮಿತಿಯಿಂದ ಬಹಿರಂಗವಾಗುತ್ತಿದ್ದಂತೆ. ಟಾಲಿವುಡ್ ನಲ್ಲೂ ಹೇಮಾ ಸಮಿತಿಯಂತಹ ಸಮಿತಿ ರಚನೆಯಾಗಬೇಕು ಎಂದು ನಟಿ ಸಮಂತಾ ಹೇಳಿದ್ದಾರೆ. ಈ ಪೈಕಿ ನಟಿ ಶೃತಿ ಹರಿಹರನ್‌ ಸ್ಯಾಂಡಲ್‌ವುಡ್‌ನಲ್ಲಿಯೂ ಇಂತಹ ಸಮಿತಿ ರಚನೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ..

Written by - Krishna N K | Last Updated : Sep 3, 2024, 05:46 PM IST
    • ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಸಂಚಲನ ಮೂಡಿಸಿದೆ.
    • ನಟಿಯರು ತಾವು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಕುರಿತು ಧ್ವನಿ ಎತ್ತುತ್ತಿದ್ದಾರೆ.
    • ಶ್ರುತಿ ಹರಿಹರನ್ ಸ್ಯಾಂಡಲ್‌ವುಡ್‌ನಲ್ಲಿ ಇಂತಹ ಸಮಿತಿಯ ಅವಶ್ಯಕತೆ ಇದೆ ಎಂದಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲೂ ಲೈಂಗಿಕ ಕಿರುಕುಳದ ಬಗ್ಗೆ ಸಮೀಕ್ಷೆ ಆಗಬೇಕು..! ನಟಿ ಶ್ರುತಿ ಹರಿಹರನ್  title=

Hema committee report : ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಸಂಚಲನ ಮೂಡಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ನಾಯಕಿಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಮತ್ತು ಶೋಷಣೆ ಕುರಿತು ಹೇಮಾ ಸಮಿತಿ ವರದಿ ಬಿಡುಗಡೆ ಮಾಡಿದ್ದು ಗೊತ್ತೇ ಇದೆ. ಈ ವರದಿ 2019ರಲ್ಲಿಯೇ ಸರಕಾರದ ಕೈಸೇರಿತು. ಈಗ ವರದಿಯ ವಿಷಯಗಳು ಹೊರಬಿದ್ದಿವೆ. 

ವರದಿಯಲ್ಲಿ ಅನೇಕ ನಾಯಕಿಯರು ತಮಗಾದ ಕಹಿ ಅನುಭವಗಳನ್ನು ಧೈರ್ಯವಾಗಿ ಹೇಳಿದ್ದಾರೆ. ಟಾಲಿವುಡ್ ನಲ್ಲೂ ಹೇಮಾ ಸಮಿತಿಯಂತಹ ಸಮಿತಿ ರಚನೆಯಾಗಬೇಕು ಎಂದು ಸಮಂತಾ ಹೇಳಿದ್ದಾರೆ. ಇತ್ತೀಚೆಗಷ್ಟೇ ನಟಿ ಶ್ರುತಿ ಹರಿಹರನ್ ಸಹ ಸ್ಯಾಂಡಲ್‌ವುಡ್‌ನಲ್ಲಿ ಇಂತಹ ಸಮಿತಿಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ..

ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆಗೆ ಕಾರಣ ಬಹಿರಂಗ..! ಪವಿತ್ರಾಗೌಡ ಅಶ್ಲೀಲ ಮೆಸೇಜ್‌ಗಳ ಮಾಹಿತಿ ಕೊಟ್ಟ Instagram 

ಹೇಮಾ ಸಮಿತಿ ವರದಿ ಬಗ್ಗೆ ನನಗೆ ಅಪಾರ ಗೌರವವಿದೆ. ನಾವು ಬಹಳ ಸಮಯದಿಂದ ಮುಚ್ಚಿದ ಬಾಗಿಲುಗಳ ಹಿಂದೆ ಈ ಬಗ್ಗೆ ಮಾತನಾಡುತ್ತಿದ್ದೇವೆ. ನಮ್ಮ ಆಪ್ತ ವಲಯದ ಕೆಲವರು ಈ ಬಗ್ಗೆ ತಮಾಷೆ ಮಾಡುತ್ತಿದ್ದರು. ಆದರೆ, ಕೇರಳ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಹೇಮಾ ಸಮಿತಿಯಂತೆ ಸ್ಯಾಂಡಲ್‌ವುಡ್‌ನಲ್ಲಿಯೂ ಸಮಿತಿ ರಚನೆಯಾಗಬೇಕು ಎಂದು ಶ್ರುತಿ ಹರಿಹರನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ತಮ್ಮ ಮುಂಬರುವ ಸಿನಿಮಾಗಳ ಬಗ್ಗೆ ಮಾತನಾಡಿ, ಸಧ್ಯ ಚೀತಾ ಎಂಬ ಚಿತ್ರಕ್ಕೆ ಸಹಿ ಹಾಕಿದ್ದಾಗಿ ತಿಳಿಸಿದ್ದಾರೆ.. ಅಲ್ಲದೆ, ತಮಿಳಿನಲ್ಲಿ ಎರಡ್ಮೂರು ಸಿನಿಮಾ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News