The Kerala Story : ಪೊಲೀಸ್ ಬಿಗಿ ಭದ್ರತೆಯೊಂದಿಗೆ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನ..!
The Kerala Story controversy : ದೇಶಾದ್ಯಂತ ಇಂದು ʼದಿ ಕೇರಳ ಸ್ಟೋರಿʼ ಸಿನಿಮಾ ಬಿಡುಗಡೆಯಾಗಿದೆ. ಕೇರಳ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ತಮಿಳುನಾಡಿನಲ್ಲೂ ಚಿತ್ರ ಬಿಡುಗಡೆಯಾಗಿದೆ. ಮುನ್ನೆಚ್ಚಕಾ ಕ್ರಮವಾಗಿ ದಿ ಕೇರಳ ಸ್ಟೋರಿ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
The Kerala story : ಇಂದು ದೇಶಾದ್ಯಂತ ʼದಿ ಕೇರಳ ಸ್ಟೋರಿʼ ಸಿನಿಮಾ ಬಿಡುಗಡೆಯಾಗಿದೆ. ಕೇರಳ ಹೊರತು ಪಡಿಸಿ ಕೆಲವು ರಾಜ್ಯಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದೇ ಹೊತ್ತಲ್ಲಿ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಥಿಯೇಟರ್ ಭದ್ರತೆಗಾಗಿ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಹೌದು.. ಪೋಸ್ಟರ್ ರಿಲೀಸ್ ಆದ ದಿನದಿಂದಲೇ ಕೇರಳ ಸ್ಟೋರಿ ಸಿನಿಮಾ ವಿವಾದ ಎದುರಿಸುತ್ತಿದೆ. ಈ ಸಿನಿಮಾದಲ್ಲಿ ಅದಾ ಶರ್ಮಾ, ಪ್ರಣವ್ ಮಿಶ್ರಾ, ಯೋಗಿತಾ ಬಿಹಾನಿ, ಸೋನಿಯಾ ಬಲಾನಿ, ಸಿದ್ಧಿ ಇಟ್ನಾನಿ ಮುಂತಾದವರು ನಟಿಸಿದ್ದಾರೆ. ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಮತಾಂತರ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಹಿಂದೂ ಮಹಿಳೆಯರನ್ನು ಮತಾಂತರಗೊಳಿಸಿ ವಿದೇಶಕ್ಕೆ ಕರೆದೊಯ್ದಿದು ಭಯೋತ್ಪಾದಕ ಸಂಘಟನೆಗೆ ಸೇರಿಸುವ ವಿಷಯವನ್ನು ತಿಳಿಸಲಾಗಿದೆ. ಇದು ಸತ್ಯ ಕಥೆ ಎಂದು ಚಿತ್ರತಂಡ ತಿಳಿಸಿತ್ತು.
ಇದನ್ನೂ ಓದಿ: The Kerala Story: ಇಸ್ಲಾಂ ಧರ್ಮದ ವಿರುದ್ಧ 'ದಿ ಕೇರಳ ಸ್ಟೋರಿ'ಯಲ್ಲಿ ಅಂಥದ್ದೇನಿದೆ?
ಆದರೆ ಕೇರಳದಲ್ಲಿ ಇಂತಹ ಘಟನೆಗಳು ನಡೆಯದೆ ಧಾರ್ಮಿಕ ಸೌಹಾರ್ದತೆ ಕದಡಲು ಈ ಸಿನಿಮಾ ಮಾಡಲಾಗಿದೆ ಎಂದು ವಿರೋಧ ವ್ಯಕ್ತವಾಗಿತ್ತು. ಸ್ವತಃ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಕೇರಳದಲ್ಲಿ ದ್ವೇಷ ಮತ್ತು ಪ್ರತ್ಯೇಕತಾವಾದವನ್ನು ಹುಟ್ಟುಹಾಕುವ ಯೋಜನೆಯೊಂದಿಗೆ ಈ ಚಿತ್ರವನ್ನು ತೆಗೆಯಲಾಗಿದೆ ಎಂದು ಟೀಕಿಸಿದ್ದರು. ಸೆನ್ಸಾರ್ ಮಂಡಳಿಯು ಚಿತ್ರದಲ್ಲಿನ 10 ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಎ ಸರ್ಟಿಫಿಕೇಟ್ ನೀಡಿದೆ ಎಂದು ವರದಿಯಾಗಿದೆ.
ಇನ್ನು ಕೇರಳದಲ್ಲಿ ಈ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ, ತಮಿಳುನಾಡಿನಲ್ಲಿ ಬಿಡುಗಡೆಯಾದರೆ ಕೆಲವು ಸಮುದಾಯಗಳಿಂದ ವಿರೋಧ ವ್ಯಕ್ತವಾಗಲಿದೆ ಎಂಬುವುದಾಗಿ ಗುಪ್ತ ಮೂಲಗಳಿಂದ ಮಾಹಿತಿ ಬಂದಿತ್ತು. ಹಾಗಾಗಿ ತಮಿಳುನಾಡಿನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅನುಮತಿ ನೀಡದಂತೆ ರಾಜ್ಯ ಗುಪ್ತಚರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ ಕೊಯಮತ್ತೂರಿನ ಬ್ರೂಕ್ ಫೀಲ್ಡ್ ಮಾಲ್ ನಲ್ಲಿ 12.55ಕ್ಕೆ ಚಿತ್ರ ಬಿಡುಗಡೆಯಾಗಿದ್ದು, ಚಿತ್ರಮಂದಿರಕ್ಕೆ 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇಂದು ಪ್ರದರ್ಶನಗೊಳ್ಳುತ್ತಿರುವ ದೀ ಕೇರಳ ಸ್ಟೋರಿ ಥಿಯೇಟರ್‌ಗೆ 50ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭದ್ರತೆ ಒದಗಿಸುತ್ತಿದ್ದಾರೆ.
ಇದನ್ನೂ ಓದಿ: ʼಸಲ್ಮಾನ್ ಖಾನ್ ತಮ್ಮʼನ ಪಾತ್ರಕ್ಕೆ ʼರಾಘವ್ ಜುಯಲ್ʼ ಪಡೆದ ಹಣ ಎಷ್ಟು ಗೊತ್ತಾ..! ಶಾಕ್ ಆಗ್ತೀರಾ
ಈ ಕುರಿತು ನೆಲ್ಲೈ ಹಿಂದೂ ಫ್ರಂಟ್ ರಾಜ್ಯ ಉಪಾಧ್ಯಕ್ಷ ವಿ.ಪಿ.ಜಯಕುಮಾರ್ ಮಾತನಾಡಿ, ತಮಿಳುನಾಡು ಸರ್ಕಾರ ವ್ಯವಸ್ಥಿತವಾಗಿ ಹಿಂದೂಗಳನ್ನು ಅನ್ಯ ಧರ್ಮಕ್ಕೆ ಕಳುಹಿಸಲು ಯತ್ನಿಸುತ್ತಿದೆ. ತಮಿಳುನಾಡಿನಲ್ಲಿ ಗುಪ್ತಚರ ಅಧಿಕಾರಿ ಧಾರ್ಮಿಕವಾಗಿ ಕೆಲಸ ಮಾಡುತ್ತಿದ್ದಾರೆ. ಮತಾಂತರ ಯತ್ನದ ಬಗ್ಗೆ ದೂರು ನೀಡಿದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಮ ಜರುಗಿಸಿಲ್ಲ. ಪ್ರಕರಣಗಳಲ್ಲಿ ಅಲ್ಲಿ ಅರ್ಜಿ ಸಲ್ಲಿಸಿದರೆ ಪ್ರಥಮ ಮಾಹಿತಿ ವರದಿ ದಾಖಲಾಗಿಲ್ಲ. ತಮಿಳುನಾಡಿನಲ್ಲಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಅವಕಾಶ ನೀಡದಿದ್ದರೆ ಹಿಂದೂ ಫ್ರಂಟ್ ಒಟಿಟಿಯಲ್ಲಿ ಚಿತ್ರ ಬಿಡುಗಡೆ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.