ಬೆಂಗಳೂರು: ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಸುದೀಪ್ ಅವರು ನಾಳೆ (ಸೆಪ್ಟೆಂಬರ್ 02) ಶನಿವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ 'God Forgives, I don't - King Kichcha' ಎಂಬ ಅಡಿಬರಹವಿದ್ದು, ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಮಗನಿಗೆ ಗನ್ ಮ್ಯಾನ್ ಆಗಿದ್ದ ವ್ಯಕ್ತಿಯಿಂದ ಫೈರಿಂಗ್


‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆ’ ಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.


ಇದನ್ನೂ ಓದಿ:ಬಿಡದಿ ನಿತ್ಯಾನಂದ ಸ್ಬಾಮಿ ವಿರುದ್ಧ ಪ್ರಕರಣದ ಕುರಿತಂತೆ ರಾಜ್ಯ ಪೊಲೀಸರಿಗೆ ಸ್ಟಷ್ಟನೆ ಕೇಳಿದ ಇಂಟರ್ ಪೊಲ್


ಸುದೀಪ್ ನಿರ್ದೇಶನದಲ್ಲಿ ಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡುವ ಕಾರ್ತಿಕ್ ಗೌಡ, ‘’ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದ್ದು, ಅವರು ನಟನೆಯ ಜೊತೆಗೆ ನಿರ್ದೇಶನ ಸಹ ಮಾಡುತ್ತಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ’ ಎನ್ನುತ್ತಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.