Aishwarya Rajesh New Movie : ಐಶ್ವರ್ಯಾ ರಾಜೇಶ್ ನಟನೆಯ 'ಡ್ರೈವರ್ ಜಮುನಾ' ಸಿನಿಮಾದ ಫಸ್ಟ್ ಲುಕ್ ರಿಲೀಸ್

ಡ್ರೈವರ್ ಜಮುನಾ ಎಂಬ ಸಿನಿಮಾದಲ್ಲಿ ಐಶ್ವರ್ಯ ನಟಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

Written by - Zee Kannada News Desk | Last Updated : May 5, 2022, 07:55 PM IST
  • ನಟಿ ಐಶ್ವರ್ಯಾ ರಾಜೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ರಿವೀಲ್
  • ಡ್ರೈವರ್ ಜಮುನಾ ಎಂಬ ಸಿನಿಮಾದಲ್ಲಿ ಐಶ್ವರ್ಯ ನಟಿಸ್ತಿದ್ದು
  • 'ವತ್ತಿಕುಚ್ಚಿ’ ಖ್ಯಾತಿಯ ಸಿನಿಮಾ ಖ್ಯಾತಿಯ ಪಾ. ಕಿನ್ಸ್ಲಿನ್ ಡ್ರೈವರ್ ಜಮುನಾ ಚಿತ್ರಕ್ಕೆ ಆಕ್ಷನ್ ಕಟ್
Aishwarya Rajesh New Movie : ಐಶ್ವರ್ಯಾ ರಾಜೇಶ್ ನಟನೆಯ 'ಡ್ರೈವರ್ ಜಮುನಾ' ಸಿನಿಮಾದ ಫಸ್ಟ್ ಲುಕ್ ರಿಲೀಸ್ title=

ಬೆಂಗಳೂರು : ವಿಶಿಷ್ಟ ಪಾತ್ರಗಳ ಮೂಲಕ ತಮ್ಮ ಅಮೋಘ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸ್ತಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಡ್ರೈವರ್ ಜಮುನಾ ಎಂಬ ಸಿನಿಮಾದಲ್ಲಿ ಐಶ್ವರ್ಯ ನಟಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

'ವತ್ತಿಕುಚ್ಚಿ’ ಖ್ಯಾತಿಯ ಸಿನಿಮಾ ಖ್ಯಾತಿಯ ಪಾ. ಕಿನ್ಸ್ಲಿನ್ ಡ್ರೈವರ್ ಜಮುನಾ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಐಶ್ವರ್ಯಾ ರಾಜೇಶ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ತಾರಾಬಳಗದಲ್ಲಿ ಆಡುಕಳಂ ನರೇನ್, ಶ್ರೀ ರಂಜನಿ, ‘ಸ್ಟ್ಯಾಂಡ್ ಅಪ್ ಕಾಮಿಡಿಯನ್’ ಅಭಿಷೇಕ್, ‘ರಾಜಾ ರಾಣಿ’ ಸಿನಿಮಾ ಖ್ಯಾತಿಯ ಪಾಂಡಿಯನ್, ಕವಿತಾ ಭಾರತಿ, ಪಾಂಡಿ, ಮಣಿಕಂದನ್, ರಾಜೇಶ್ ಮತ್ತು ಅನೇಕರು ಇದ್ದಾರೆ. ಗೋಕುಲ್ ಬೆನೊಯ್ ಛಾಯಾಗ್ರಹಣ, ಗಿಬ್ರಾನ್ ಸಂಗೀತ ಜವಾಬ್ದಾರಿ ಹೊತ್ತುಕೊಂಡಿದ್ದು, ಎಸ್.ಪಿ.ಚೌದರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ : ತೆರೆಮೇಲೆ ಅಬ್ಬರಿಸಲು ಸಜ್ಜಾದ 'ಮಾರ್ಟಿನ್‌'! ರಿಲೀಸ್‌ ಡೇಟ್‌ ಫಿಕ್ಸ್

ಡ್ರೈವರ್ ಜಮುನಾ ಸಿನಿಮಾ ಮಹಿಳಾ ಕ್ಯಾಬ್ ಡ್ರೈವರ್ ಸುತ್ತ ನಡೆಯುವ ಘಟನೆಯಾಗಿದ್ದು, ಈ ಪಾತ್ರಕ್ಕಾಗಿ ಐಶ್ವರ್ಯಾ ಮಹಿಳಾ ಕ್ಯಾಬ್ ಡ್ರೈವರ್ ಭೇಟಿ ಮಾಡಿ ಅವರ ಹವಾ-ಭಾವವನ್ನು ತಮ್ಮ ಪಾತ್ರದಲ್ಲಿ ಅಳವಡಿಸಿಕೊಂಡಿದ್ದಾರೆ.

ಯಾವುದೇ ಡೂಪ್ ಬಳಸದೇ ಐಶ್ವರ್ಯಾ ತಮ್ಮ ಪಾತ್ರ ಮಾಡಿದ್ದಾರೆ. ಈಗಾಗಲೇ  ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಪ್ರಮೋಷನ್ ಕಹಳೆ ಮೊಳಗಿಸಿದೆ. ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂನಲ್ಲಿ ಸಿನಿಮಾ ಮೂಡಿ ಬರಲಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News