ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಶೀಘ್ರದಲ್ಲೇ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ಈ ಕ್ರಮದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ದೆಹಲಿಯ ಏಳು ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಕುರಿತು ಚರ್ಚೆಯನ್ನು ಪ್ರಾರಂಭಿಸಿದೆ. ಅಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಎಎಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
2014 ಮತ್ತು 2019ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಏಳು ಸಂಸದೀಯ ಸ್ಥಾನಗಳನ್ನು ಗೆದ್ದಿತ್ತು. ಇತಿಹಾಸ ಪುನರಾವರ್ತನೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ಈ ಬಾರಿ ಹೊಸಬರಿಗೆ ಅವಕಾಶ ನೀಡಲು ಬಿಜೆಪಿ ನಾಯಕತ್ವ ಚಿಂತನೆ ನಡೆಸಿದೆ ಎನ್ನಲಾಗಿದೆ. ಇನ್ನೊಂದೆಡೆ ಎಎಪಿ-ಕಾಂಗ್ರೆಸ್ ಮೈತ್ರಿಕೂಟ ಈ ಬಾರಿ ಶತಾಯ ಗತಾಯ ದೆಹಲಿಯನ್ನು ವಶಪಡಿಸಿಕೊಳ್ಳಬೇಕೆಂಬ ಪಣತೊಟ್ಟಿವೆ.
ಇದನ್ನೂ ಓದಿ: 19 ವರ್ಷಗಳಲ್ಲಿ 46 ಚಿತ್ರಗಳು.. ಸದ್ಯ ಒಟಿಟಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ಈಕೆ!
ಎಎಪಿ-ಕಾಂಗ್ರೆಸ್ ಮೈತ್ರಿ ವಿರುದ್ಧ ಹೋರಾಡಲು ಬಿಜೆಪಿ ಸ್ಟಾರ್ ಹೀರೋನನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ. ಸ್ಥಳೀಯತೆಯನ್ನು ಗಮನದಲ್ಲಿಟ್ಟುಕೊಂಡು ಬಾಲಿವುಡ್ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ. ಚಾಂದಿನಿ ಚೌಕ್ನಿಂದ ಅಕ್ಷಯ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಹರ್ಷವರ್ಧನ್ 2014 ಮತ್ತು 2019ರಲ್ಲಿ ಎರಡು ಬಾರಿ ಈ ಕ್ಷೇತ್ರದಿಂದ ಗೆದ್ದಿದ್ದರು. ಅಕ್ಷಯ್ ಅವರ ಸ್ಪರ್ಧೆಯ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಇದನ್ನೂ ಓದಿ: ತಾಯಿ ಆಗಲಿರುವ ದೀಪಿಕಾ ಪಡುಕೋಣೆ ನಿಜವಾದ ವಯಸ್ಸೆಷ್ಟು ಗೊತ್ತಾ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.