Bade Miyan Chote Miyan movie : ಬಡೆ ಮಿಯಾನ್ ಚೋಟೆ ಮಿಯಾನ್ ಟ್ರೇಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ.


COMMERCIAL BREAK
SCROLL TO CONTINUE READING

ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 


ಇದನ್ನೂ ಓದಿ: ನಟಿ ಅದಿತಿ ರಾವ್‌ ಯಾರು ಗೊತ್ತೆ..? ನಿಮ್ಮನ್ನ ಬೆಚ್ಚಿ ಬೀಳಿಸುತ್ತೆ ನಟಿಯ ಇತಿಹಾಸ


ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ 'ಬಡೇ ಮಿಯಾನ್ ಚೋಟೆ ಮಿಯಾನ್' ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.


ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. 2024ರ ಏಪ್ರಿಲ್ - ಈದ್ ಸಂದರ್ಭ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.