ಕಿಚ್ಚನ ‘ಮ್ಯಾಕ್ಸ್’ ಹೆಸರಲ್ಲಿ ಆಂಬುಲೆನ್ಸ್ ಸೇವೆ…ಇದು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ನ ಕೊಡುಗೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ ಕಣ್ಣಮುಂದಿವೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಕಿಚ್ಚನ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ.
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ ಕಣ್ಣಮುಂದಿವೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಕಿಚ್ಚನ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ.
ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.
ಇದನ್ನೂ ಓದಿ : Ayodhya: ಅಯೋಧ್ಯೆಗೆ ಹೋಗಲು ಬಯಸುವವರಿಗೆ ಗುಡ್ ನ್ಯೂಸ್.. ರೈಲ್ವೆ ಇಲಾಖೆ ಮಹತ್ವದ ನಿರ್ಧಾರ!
ಅಂದಹಾಗೇ ಮ್ಯಾಕ್ಸ್ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ.
ಕಾಲಿವುಡ್‌ನ ಖ್ಯಾತ ಡೈರೆಕ್ಟರ್ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದು, ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ. ಮ್ಯಾಕ್ಸ್ ಚಿತ್ರದಲ್ಲಿ ದೊಡ್ಡ ತಾರಾಂಗಣವೇ ಇರಲಿದ್ದು, ಇದರಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್, ಕಾಮರಾಜ್, ಸುಕೃತಾ ವಾಗ್ಲೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದು ಸಾಹಸಮಯ ಚಿತ್ರವಾಗಿದ್ದು ಮತ್ತು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥಾನು ಹಣ ಹಾಕಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ