Kabzaa Trailer : ತಮ್ಮ ಅಮೋಘ ಅಭಿನಯದಿಂದ ಜನಮನಸೂರೆಗೊಂಡಿರುವ ಭಾರತದ ಖ್ಯಾತ ನಟ ʼಅಮಿತಾಭ್ ಬಚ್ಚನ್ʼ ಇಂದು (ಮಾರ್ಚ್ 4) ಸಂಜೆ 5 ಗಂಟೆ 2 ನಿಮಿಷಕ್ಕೆ ಮುಂಬೈನಲ್ಲಿ ಕಬ್ಜ ಸಿನಿಮಾದ ಟ್ರೈಲರ್‌ ಬಿಡಗಡೆ ಮಾಡಲಿದ್ದಾರೆ. ಪ್ರಪಂಚದಾದ್ಯಂತ ಬಿಡುಗಡೆಗೂ ಮುಂಚೆಯೇ ಗಮನ ಸೆಳೆದಿರುವ "ಕಬ್ಜ" ಟ್ರೇಲರ್ ನೋಡಿ ಖುಷಿಪಟ್ಟಿರುವ ಬಿಗ್‌ ಬಿ ನಿರ್ದೇಶಕ ಆರ್. ಚಂದ್ರು ಅವರನ್ನು ಮುಂಬೈಗೆ ಕರೆಸಿಕೊಂಡು ಎಲ್ಲಾ ಭಾಷೆಗಳ ಟ್ರೇಲರನ್ನು ಬಿಡುಗಡೆ ಮಾಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಪ್ಯಾನ್ ಇಂಡಿಯಾ ಕಬ್ಜ ಸಿನಿಮಾಗೆ ಇಡೀ ಎಲ್ಲಾ ಇಂಡಸ್ಟ್ರಿ ಮತ್ತು ಸ್ಟಾರ್ ನಟನಟಿಯರು ಕೂಡ ಕಾದುಕುಳಿತಿದ್ದಾರೆ. ರವಿ ಬಸ್ರೂರ್ ಸಂಗೀತದ ಮೂಲಕ ದೊಡ್ಡ ಮಟ್ಟದಲ್ಲಿ ಕಮಾಲ್ ಮಾಡ್ತಿದೆ ಕಬ್ಜ ಹಾಡು. ಕಬ್ಜದಲ್ಲಿ ಉಪೇಂದ್ರಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದು, ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮ ಮುಂತಾದವರು ಅಭಿನಯಿಸಿದ್ದಾರೆ. 'ಕೆಜಿಎಫ್' ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಮಾಡಿದ್ದು, 'ಕೆಜಿಎಫ್' ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.ಇದು ಸ್ವಾತಂತ್ರ್ಯಪೂರ್ವದ ಭೂಗತ ಲೋಕದ ಕಥೆಯಾಗಿದೆ.


ಇದನ್ನೂ ಓದಿ: Appu Fans : 'ಯುವ' ಟೈಟಲ್ ಕಂಡು ಭಾವುಕರಾದ ಅಪ್ಪು ಫ್ಯಾನ್ಸ್‌ ..! ಕಾರಣವಾದ್ರೂ ಏನು ?


ಇತ್ತೀಚಿಗೆ ಶಿಡ್ಲಘಟ್ಟದ ಜೂನಿಯರ್ ಕಾಲೇಜ್ ನೆಹರು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಬ್ಜ ಸಿನಿಮಾದ ಚುಮ್‌ ಚುಮ್‌ ಚಳಿ ಸಾಂಗ್‌ ಅನ್ನು ರಿಲೀಸ್‌ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್, ಗೀತಾ ಶಿವರಾಜ್ಕುಮಾರ್, ಆರೋಗ್ಯ ಸಚಿವ ಡಾಕ್ಟರ್ ಕೆ. ಸುಧಾಕರ್ ಮುಂತಾದ ಗಣ್ಯರು ಪಾಲ್ಗೊಂಡಿದ್ದರು. ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಮಾರ್ಚ್ 17 ಅಂದ್ರೆ ಅಪ್ಪು ಹುಟ್ಟುಹಬ್ಬದ ದಿನದಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.