Dasara Movie Controversy: ದಸರಾ ಸಿನಿಮಾ ವಿವಾದದ ಸುಳಿಯಲ್ಲಿ ಸಿಲುಕಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ಅಂಗನವಾಡಿ ಶಿಕ್ಷಕರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಅದಿಲಾಬಾದ್ ಜಿಲ್ಲಾ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಸಮಾಜಕ್ಕೆ ಸಾಕಷ್ಟು ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ದಸರಾ ಸಿನಿಮಾದಲ್ಲಿ ಕಳ್ಳರಂತೆ ಬಿಂಬಿಸಲಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದಸರಾ ಸಿನಿಮಾ ನಿರ್ಮಾಪಕರು, ನಿರ್ದೇಶಕರು, ನಟರು ತಮ್ಮ ಹಾಗೂ ತಾವು ಅನೇಕ ಕಷ್ಟಗಳನ್ನು ಅನುಭವಿಸಿದ ವೃತ್ತಿಯನ್ನು ಅವಹೇಳನ ಮಾಡುವ ದೃಶ್ಯಗಳನ್ನು ಹಾಕುವ ಮೂಲಕ ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಅದಿಲಾಬಾದ್ ಜಿಲ್ಲಾ ಕೇಂದ್ರದಲ್ಲಿ ದಸರಾ ಚಿತ್ರ ಪ್ರದರ್ಶನದ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸಲಾಯಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Pushpa 2 : ಸಿನಿಮಾ ಶೂಟಿಂಗ್‌ ಸ್ಥಗಿತ.. ಪುಷ್ಪ 2 ಬಗ್ಗೆ ಇಲ್ಲಿದೆ ಬಿಗ್ ಅಪ್‌ಡೇಟ್!


ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು ತಮಗೆ ಅವಮಾನ ಮಾಡುವ ದೃಶ್ಯಗಳನ್ನು ದಸರಾ ಸಿನಿಮಾದಿಂದ ತೆಗೆದು ಹಾಕಬೇಕು. ದಸರಾ ಚಿತ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಭಾವನೆಗೆ ಧಕ್ಕೆ ತರುವ ದೃಶ್ಯಗಳನ್ನು ತೆಗೆದು ಹಾಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. 


ಇದೇ ವೇಳೆ ದಸರಾ ಸಿನಿಮಾ ಬಾಕ್ಸ್ ಆಫೀಸ್‌ನಲ್ಲೂ ಸಖತ್‌ ಗಳಿಕೆ ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾದ ಮೊದಲ ದಿನ  38 ಕೋಟಿ  ರೂಪಾಯಿ ಗಳಿಸಿದೆ. ನ್ಯಾಚುರಲ್‌ ಸ್ಟಾರ್‌ ನಾನಿ ಅವರ ವೃತ್ತಿಜೀವನದಲ್ಲಿ 1 ನೇ ದಿನದಂದು ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ. ಇದಲ್ಲದೇ ಈ ವರ್ಷ ನಮ್ಮ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಚಿತ್ರಗಳ ಪೈಕಿ ಮೊದಲ ದಿನವೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆಯನ್ನೂ ಹೊಂದಿದೆ. ಈ ವಾರಾಂತ್ಯದಲ್ಲಿ ಚಿತ್ರದ ಬಾಕ್ಸ್ ಆಫೀಸ್ ಲೆಕ್ಕಾಚಾರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಿವೆ ಟ್ರೇಡ್ ಮೂಲಗಳು. ಮಾಸ್ ಪ್ರೇಕ್ಷಕರನ್ನು ರಂಜಿಸುತ್ತಿರುವ ದಸರಾ ಸಿನಿಮಾದ ಕಲೆಕ್ಷನ್ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ : NMACC:ಅದ್ದೂರಿ ಎಂಟ್ರಿ ಪಡೆದ ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.