ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಇಂದು ಸಿಬಿಐಗೆ ಮನವಿಯೊಂದನ್ನು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅವರು ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಹತ್ಯೆ ಮಾಡಲಾಗಿದೆಯೇ? ಅಥವಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸುವಂತೆ ಅವರು ಸಿಬಿಐಗೆ ಮನವಿ ಮನವಿ ಮಾಡಿದ್ದಾರೆ.
It has been more than 5 months since the investigation began but CBI has not revealed if actor Sushant Singh Rajput was murdered or he died by suicide. I request CBI to reveal findings of the investigation at the earliest: Maharashtra Home Minister Anil Deshmukh pic.twitter.com/BMGgLdaoyg
— ANI (@ANI) December 27, 2020
ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖಾ ವರದಿಯ ನಿಷ್ಕರ್ಷಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಅನಿಲ್ ದೇಶ್ಮುಖ್ ಹೇಳಿದ್ದಾರೆ. "ತನಿಖೆ ಪ್ರಾರಂಭವಾಗಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ಗತಿಸಿದೆ, ಆದರೆ ನಟ ಸುಶಾಂತ್ ಸಿಂಗ್ ರಜಪೂತ್ ಹತ್ಯೆಯಾಗಿದೆಯೋ ಅಥವಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದನ್ನು ಸಿಬಿಐ ಇದುವರೆಗೆ ಬಹಿರಂಗಪಡಿಸಿಲ್ಲ" ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ- ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿಯ ಟ್ವಿಟರ್, ಇನ್ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ..!
ಇತ್ತೀಚೆಗಷ್ಟೇ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ಕುರಿತು ಸಿಬಿಐ ನಡೆಸಿರುವ ತನಿಖೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ದಾಖಲಿಸಿತ್ತು. ಈ ಪಿಐಎಲ್‌ನಲ್ಲಿ, ಸುಶಾಂತ್ ಪ್ರಕರಣದಲ್ಲಿ ಸಿಬಿಐನಿಂದ ಸ್ಟೇಟಸ್ ವರದಿಯನ್ನು ಪಡೆದುಕೊಳ್ಳಲು ಕೋರಲಾಗಿತ್ತು.
ಇದನ್ನು ಓದಿ- Drugs Case: ಬಾಲಿವುಡ್ ನಲ್ಲಿ ಡ್ರಗ್ಸ್ ಕುರಿತು ನೋವು ಹೊರಹಾಕಿದ Akshay ಕುಮಾರ್ ಹೇಳಿದ್ದೇನು?
ಸುಶಾಂತ್ ಸಿಂಗ್ ರಜಪೂತ್ ಅವರು ಜೂನ್ 14, 2020 ರಂದು ಮುಂಬೈನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಿಬಿಐ ಅಲ್ಲದೆ ಇಡಿ ಮತ್ತು ಎನ್‌ಸಿಬಿ ಕೂಡ ಪ್ರಕರಣದ ತನಿಖೆ ನಡೆಸುತ್ತಿರುವುದು ಗಮನಾರ್ಹ.
ಇದನ್ನು ಓದಿ- Sushant Case: ತನ್ನ ಅಂತಿಮ ವರದಿ ಸಲ್ಲಿಸಿದ AIIMS, ಮರ್ಡರ್ ಅಲ್ಲ ಆತ್ಮಹತ್ಯೆಗೆ ಶರಣಾಗಿದ್ದ ನಟ ಎಂದ ಮೂಲಗಳು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.