ಜೂನ್ 14 ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "chef ಚಿದಂಬರ"..! 

Anirudh Jatkar : ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ "chef ಚಿದಂಬರ" ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

Written by - Krishna N K | Last Updated : May 17, 2024, 10:46 AM IST
    • "chef ಚಿದಂಬರ" ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ
    • ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ "chef ಚಿದಂಬರ" ಚಿತ್ರ
    • ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ.
ಜೂನ್ 14 ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "chef ಚಿದಂಬರ"..!  title=

Chef Chidambara movie : ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ. ಇವರು ನಾಯಕನಾಗಿ ನಟಿಸಿರುವ "chef ಚಿದಂಬರ" ಚಿತ್ರ ಇದೇ ಜೂನ್ 14 ರಂದು  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ದ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ‌. 

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ  ಚಿತ್ರವನ್ನು "ರಾಘು" ಚಿತ್ರದ  ನಿರ್ದೇಶಕ ಎಂ ಆನಂದರಾಜ್ ನಿರ್ದೇಶಿಸಿದ್ದಾರೆ.  ಕಥೆ, ಚಿತ್ರಕಥೆಯನ್ನು ನಿರ್ದೇಶಕರು ಬರೆದಿದ್ದು,   ಸಂಭಾಷಣೆ ಗಣೇಶ್ ಪರಶುರಾಮ್ ಅವರದು. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, "ವಿಕ್ರಾಂತ್ ರೋಣ" ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ‌. ಮೊದಲ ಪೋಸ್ಟರ್ ನಿಂದ ಹಿಡಿದು ಇತ್ತೀಚೆಗೆ ಬಿಡುಗಡೆಯಾದ ಟೈಟಲ್ ಟ್ರ್ಯಾಕ್ ತನಕ ಎಲ್ಲವೂ ಜನಮನಸೂರೆಗೊಂಡಿದೆ‌. 

ಇದನ್ನೂ ಓದಿ:ಅಪ್ಪ-ಮಗಳ 'ಸಿ'ಗೆ ಆಕ್ಷನ್ ಪ್ರಿನ್ಸ್ ಧ್ರುವ ಸ್ರಜಾ ಸಾಥ್..! ಜುಲೈ 12ಕ್ಕೆ ತೆರೆಗೆ

 ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ "ಲವ್ ಮಾಕ್ಟೇಲ್" ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು "chef ಚಿದಂಬರ" ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News