Lawrence Bishnoi Threat To Salman Khan: ಬಾಲಿವುಡ್ ನ ಭಾಯಿಜಾನ್ ಸಲ್ಮಾನ್ ಖಾನ್‌ಗೆ ಮೇಲಿಂದ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ.. ಇದೀಗ ಅವರಿಗೆ ಮತ್ತೊಮ್ಮೆ ಬೆದರಿಕೆ ಬಂದಿದೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಲಾರೆನ್ಸ್ ಬಿಷ್ಣೋಯ್ ಸಹೋದರ ಸಲ್ಮಾನ್ ಖಾನ್ ಗೆ ಈ ಬೆದರಿಕೆ ಹಾಕಿದ್ದಾನೆ.
"ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳು, ಇಲ್ಲದಿದ್ದರೆ..."
ಸಿಕ್ಕಿರುವ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್ ಗೆ ಬೆದರಿಕೆ ಕರೆ ಬಂದಿದೆ. ಈ ಬಾರಿ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಸಂದೇಶ ನೀಡಿದ್ದಾರೆ. ನಾನು ಲಾರೆನ್ಸ್ ಬಿಷ್ಣೋಯ್ ಸಹೋದರ ಮಾತನಾಡುತ್ತಿದ್ದೇನೆ.. ಸಲ್ಮಾನ್ ಖಾನ್ ಬದುಕಬೇಕಾದರೆ ನಮ್ಮ ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು. ಅವನು ಇದನ್ನು ಮಾಡದಿದ್ದರೆ, ನಾವು ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಇಂದಿಗೂ ಸಕ್ರಿಯವಾಗಿದೆ ಎಂದು ಬೆದರಿಕೆ ಹಾಕಿದ್ದಾರೆ..
ಮುಂಬೈ ಪೊಲೀಸರ ಸಂಚಾರ ವಿಭಾಗದ ಕಂಟ್ರೋಲ್ ರೂಂಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ, ಈ ವಿಷಯದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ. ಕಳೆದ ವಾರದಲ್ಲಿ ಸಲ್ಮಾನ್ ಖಾನ್ ಅವರಿಗೆ ಎರಡನೇ ಬಾರಿಗೆ ಕೊಲೆ ಬೆದರಿಕೆಗಳು ಬಂದಿವೆ. ಹೀಗಾಗಿ ಪೊಲೀಸ್ ವ್ಯವಸ್ಥೆ ಕಟ್ಟೆಚ್ಚರ ವಹಿಸಿದೆ. ಈ ಸಂದೇಶ ಕಳುಹಿಸಿದ ವ್ಯಕ್ತಿಗಾಗಿ ಮುಂಬೈ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ-ʼನನ್ನಿಂದ ಒಂಟಿಯಾಗಿರಲು ಸಾಧ್ಯವಿಲ್ಲ..ʼ ಕೊನೆಗೂ ಎಡರನೇ ಮದುವೆ ಬಗ್ಗೆ ಬಾಯ್ತೆರೆದ ನಟಿ ಸಮಂತಾ!
ಬಿಷ್ಣೋಯ್ ಗ್ಯಾಂಗ್ ನಿಂದ ಸಲ್ಮಾನ್ ಖಾನ್ ಕೆಂಗಣ್ಣಿಗೆ ಗುರಿಯಾಗಿದ್ದೇಕೆ?:
ಇದೇ ವೇಳೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 1998ರಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದರು ಎಂಬ ಆರೋಪವಿದೆ. ಬಿಷ್ಣೋಯಿ ಸಮುದಾಯದವರು ಅದನ್ನು ದೇವರೆಂದು ಪೂಜಿಸುತ್ತಾರೆ. ಇದರಿಂದಾಗಿ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯ್ ನಿಂದ ಪದೇ ಪದೇ ಕೊಲೆ ಬೆದರಿಕೆಗಳು ಬರುತ್ತಿವೆ.
ಬಾಬಾ ಸಿದ್ದಿಕಿ ಹತ್ಯೆಯಿಂದ ಸಲ್ಮಾನ್ ಭದ್ರತೆ ಹೆಚ್ಚಿಸಿದೆ:
ಇದಾದ ಬಳಿಕ ಸಲ್ಮಾನ್ ಖಾನ್ ಗೆ ಆತ್ಮೀಯರಾಗಿದ್ದ ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ದಸರಾ ದಿನದಂದು ಹತ್ಯೆ ಮಾಡಲಾಗಿತ್ತು. ಈ ಎರಡೂ ಘಟನೆಗಳ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಇದಾದ ನಂತರವೂ ಸಲ್ಮಾನ್ ಖಾನ್ ಗೆ ನಿರಂತರವಾಗಿ ಬೆದರಿಕೆಗಳು ಬರುತ್ತಿವೆ. ಇದರಿಂದ ಅವರ ಭದ್ರತೆಯನ್ನು ಹೆಚ್ಚಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.