ಬೆಂಗಳೂರು : ಧಾರಾವಾಹಿ, ಸಿನಿಮಾಗಳಲ್ಲಿ ಸೊಸೆಗೆ ಕಾಟ ಕೊಟ್ಟು ವರದಕ್ಷಿಣೆ ತರುವಂತೆ ಕಿರುಕುಳ ಕೊಡುವ ಅತ್ತಿಗೆಯನ್ನು ನೋಡಿದ್ದೇವೆ. ಅದೇ ರೀತಿ ನಿಜ ಜೀವನದಲ್ಲೂ ಕನ್ನಡ ಚಿತ್ರರಂಗದ ಹಿರಿಯ ನಟಿ, ಕಾಶಿನಾಥ ʼಅನುಭವʼದಲ್ಲಿ ನಟಿಸಿದ್ದ ಅಭಿನಯ ಅವರು ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನಲೆ, ಹೈಕೋರ್ಟ್‌ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. 


COMMERCIAL BREAK
SCROLL TO CONTINUE READING

ಹೌದು.. ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಅಭಿನಯ ಅವರ ವಿರದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ಅಭಿನಯ ಅವರು ತಮ್ಮ ಅಣ್ಣ ಶ್ರೀನಿವಾಸ್‌ ಅವರ ಹೆಂಡತಿ ಲಕ್ಷ್ಮಿದೇವಿಯವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯಾ ಮತ್ತು ಅವರ ತಾಯಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸಾಯಿಧರಮ್ ತೇಜ್ ಅಭಿನಯದ 'ವಿರೂಪಾಕ್ಷ' ಟೈಟಲ್​ ಗ್ಲಿಂಪ್ಸ್​ ರಿಲೀಸ್‌


ಲಕ್ಷ್ಮೀದೇವಿಯವರು 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಮದುವೆಯಾಗಿದ್ರು. ಮದುವೆ ವೇಳೆ ಅಭಿನಯ ಕುಟುಂಬ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷಕ್ಕೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನ ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನ ಅಭಿನಯ ಫ್ಯಾಮಿಲಿ ಮೆನೆಗೆ ಕರೆತಂದಿದ್ದಿಲ್ಲ.


ಇನ್ನು ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಮಾಡಿದ್ದರಂತೆ. ಇಷ್ಟೇಲ್ಲ ಆದ್ಮೇಲೆ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ಲಕ್ಷ್ಮಿಹಾಗೂ ಪೋಷಕರು ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನ ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರ ಮೇಲ್ಮನವಿ ಸಲ್ಲಿಸಿದ್ದರು.


ಇದನ್ನೂ ಓದಿ:  Urfi Javed : ಯಕ್ಕಾ... ಬಟ್ಟೆ ಎಲ್ಲೋಯ್ತು...! ಉರ್ಫಿ ಅವತಾರ ನೋಡಿ ಕಂಗಾಲಾದ ಜನ


ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಎ-3 ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ಎ-4 ಚಲುವರಾಜ್, ಎ-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.