Anushka Sharma-Virat Kohli: ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜನಪ್ರಿಯ ಸೆಲೆಬ್ರಿಟಿ ಜೋಡಿ. ಅನುಷ್ಕಾ ಗರ್ಭಿಣಿಯಾಗಿದ್ದು, ಶೀಘ್ರದಲ್ಲೇ ಎರಡನೇ ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗಿದೆ. ದಂಪತಿಗಳು ಮಾತ್ರ ಯಾವುದೇ ಘೋಷಣೆ ಮಾಡಿಲ್ಲ.


COMMERCIAL BREAK
SCROLL TO CONTINUE READING

ಇತ್ತೀಚಿನ ಸುದ್ದಿಯಲ್ಲಿ, ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆಯ ನಂತರ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಇವರಿಬ್ಬರು ಇದರ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸದಿದ್ದರೂ, ಕೆಲವರು ಅದರ ಬಗ್ಗೆ ದೊಡ್ಡ ಸುಳಿವು ನೀಡಿದ್ದಾರೆ..


ಇದನ್ನೂ ಓದಿ-ಬಾಲಿವುಡ್‌ ನಟ ಶಾಹಿದ್ ಕಪೂರ್ ಕೋಟಿ ಕೋಟಿ ಒಡೆಯ.. ಈತನ ಆಸ್ತಿ ಎಷ್ಟು ಗೊತ್ತಾ?


ಕೌಟುಂಬಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಟೆಸ್ಟ್ ಪಂದ್ಯದಿಂದ ವಾಪಸಾಗಿದ್ದಾರೆ. ಆ ಬಳಿಕ ಕೊಹ್ಲಿ ಸ್ನೇಹಿತ, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿಡೇ ವಿಲಿಯರ್ಸ್ ಕೊಹ್ಲಿ ಎರಡನೇ ಮಗುವಿಗೆ ತಂದೆಯಾಗಲಿದ್ದಾರೆ ಎಂದಿದ್ದರು.. ಬಳಿಕ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದು, ಸ್ನೇಹಿತನ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ.


ಇದೀಗ ಕೈಗಾರಿಕೋದ್ಯಮಿ ಹರ್ಷ್ ಗೋಯೆಂಕಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ವಿರಾಟ್ ಮತ್ತು ಅನುಷ್ಕಾ ಮಗುವಿನ ಬಗ್ಗೆ ದೊಡ್ಡ ಅಪ್‌ಡೇಟ್‌ವೊಂದನ್ನು ನೀಡಿದ್ದು... ನಟಿ ಅನುಷ್ಕಾ ಗರ್ಭಿಣಿಯಾಗಿರುವ ಬಗ್ಗೆ ಪೋಸ್ಟ್ ಶೇರ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದಾರೆ..


Darshan: ಚಾಲೆಂಜಿಂಗ್‌ ಸ್ಟಾರ್‌ ಹುಟ್ಟುಹಬ್ಬಕ್ಕೆ ಒಂಬತ್ತು ಸಿನಿಮಾ ಘೋಷಣೆ!


ಸದ್ಯ ಹರ್ಷ್ ಗೋಯೆಂಕಾ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು.. ಅಭಿಮಾನಿಗಳು ಪೋಸ್ಟ್‌ಗೆ ವಿರುಷ್ಕಾ ಎಂದು ಕಾಮೆಂಟ್‌ ಮಾಡುತ್ತಿದ್ದಾರೆ.. 


ಇನ್ನು ಅನುಷ್ಕಾ ಶರ್ಮಾ ಮತ್ತು ವಿರಾಟ್ ಇಬ್ಬರೂ ತಮ್ಮ ವೈಯಕ್ತಿಕ ಜೀವನವನ್ನು ತುಂಬಾ ಖಾಸಗಿಯಾಗಿಡಲು ಬಯಸುತ್ತಾರೆ. ಹಾಗಾಗಿಯೇ ಅನುಷ್ಕಾ 2ನೇ ಮಗುವಿಗೆ ತಾಯಿಯಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದ್ದರೂ ಇದರ ಬಗ್ಗೆ ಯಾವುದೇ ಅಧಿಕೃತ ಘೋಷಣೆಗಳನ್ನು ಮಾಡಿಲ್ಲ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.