ಮೊಟ್ಟಮೊದಲ ಬಾರಿಗೆ ಮಾಲಿವುಡ್‌ಗೆ ಸ್ವೀಟಿ ಎಂಟ್ರಿ : 14 ಭಾಷೆಯ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ

Anushka Shetty : ಟಾಲಿವುಡ್‌ನ ಟಾಪ್ ನಟಿ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಪ್ಯಾನ್ ಇಂಡಿಯಾ ಚಲನಚಿತ್ರವಾಗಿ ತಯಾರಾಗುತ್ತಿರುವ ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ..   

Written by - Krishna N K | Last Updated : Sep 1, 2023, 07:15 PM IST
  • ಮೊಟ್ಟಮೊದಲ ಬಾರಿಗೆ ಮಾಲಿವುಡ್‌ಗೆ ನಟಿ ಅನುಷ್ಕಾ ಶೆಟ್ಟಿ ಎಂಟ್ರಿ.
  • 'ಕಥನಾರ್: ದಿ ವೈಲ್ಡ್ ಸೋರ್ಸರರ್' ಸಿನಿಮಾದಲ್ಲಿ ನಟಿಸಲಿದ್ದಾರೆ ಸ್ವೀಟಿ.
  • ಮಲಯಾಳಂ ಸ್ಟಾರ್ ಹೀರೋ ಜಯಸೂರ್ಯ ಅಭಿನಯದ ಕಥನಾರ್‌ ಚಿತ್ರ.
ಮೊಟ್ಟಮೊದಲ ಬಾರಿಗೆ ಮಾಲಿವುಡ್‌ಗೆ ಸ್ವೀಟಿ ಎಂಟ್ರಿ : 14 ಭಾಷೆಯ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ title=

Anushka Shetty in Kathanar : ಇಷ್ಟು ದಿನ ಟಾಲಿವುಡ್‌ ಮತ್ತು ಕಾಲಿವುಡ್‌ ಸಿನಿಮಾಗಳಲ್ಲಿ ನಟಿಸಿ ಸ್ಟಾರ್ ಹೀರೋಯಿನ್ ಆಗಿ ಬೆಳೆದ ಅನುಷ್ಕಾ ಶೆಟ್ಟಿ ಮೊಟ್ಟಮೊದಲ ಬಾರಿಗೆ ಮಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. 'ಕಥನಾರ್: ದಿ ವೈಲ್ಡ್ ಸೋರ್ಸರರ್' ಎಂಬ ಹಾರರ್ ಸಿನಿಮಾ ಮೂಲಕ ಅನುಷ್ಕಾ ಮಲಯಾಳಂ ಸಿನಿರಂಗ ಪ್ರವೇಶ ಮಾಡಲಿದ್ದಾರೆ.

ಕಥನಾರ್‌ ಸಿನಿಮಾದ ನಿರ್ಮಾಪಕರು ಇತ್ತೀಚೆಗೆ ಚಿತ್ರದ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಿದ್ದಾರೆ. ಮಲಯಾಳಂ ಸ್ಟಾರ್ ಹೀರೋ ಜಯಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಕಥನಾರ್‌ ಫಸ್ಟ್‌ ಲುಕ್‌ ರಿಲೀಸ್‌ ಮಾಡಲಾಗಿದ್ದು, ಮೊದಲ ನೋಟದಲ್ಲೇ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಐಷಾರಾಮಿ ಕಾರು ಮಾತ್ರವಲ್ಲ, ಈ 'ಜವಾನ್' ನಟಿ ಖಾಸಗಿ ಜೆಟ್‌ನಲ್ಲಿ ಪ್ರಯಾಣಿಸುತ್ತಾರೆ! ಒಟ್ಟು ಆಸ್ತಿ ಎಷ್ಟು ಗೊತ್ತಾ?

ಕೇರಳದಲ್ಲಿ ನಡೆದ ಕೆಲವು ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗುತ್ತಿದೆಯಂತೆ. ಚಿತ್ರವನ್ನು ರೋಜಿನ್ ಥಾಮಸ್ ನಿರ್ದೇಶಿಸಿದ್ದಾರೆ. ಅರುಂಧತಿಯನ್ನು ಹೋಲುವ ಪಾತ್ರದಲ್ಲಿ ಅನುಷ್ಕಾ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬರಲಿದೆಯಂತೆ. ಮೊದಲ ಭಾಗವು 2024 ರಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ಒಟ್ಟು 14 ಭಾಷೆಗಳಲ್ಲಿ ತೆರೆಗೆ ಬರಲಿದೆ.

 

ಸದ್ಯ ಅನುಷ್ಕಾ ತೆಲುಗಿನ 'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ಚಿತ್ರದಲ್ಲಿ ಯುವ ನಾಯಕ ನವೀನ್ ಪೋಲಿಶೆಟ್ಟಿ ಜೊತೆ ನಟಿಸಿದ್ದಾರೆ. ಮಹೇಶ್ ಬಾಬು ಪಿ ನಿರ್ದೇಶನದ ಈ ಚಿತ್ರ ಸೆಪ್ಟೆಂಬರ್ 07 ರಂದು ತೆರೆಗೆ ಬರಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್, ಪೋಸ್ಟರ್ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News