Chandrababu Naidu - Rajinikanth : ಕಳೆದ 2 ತಿಂಗಳಿಂದ ಭಾರತದಾದ್ಯಂತ ರಾಜಕೀಯ ಅಖಾಡ ಬಿಸಿಯಾಗಿದೆ. ಕಳೆದ ಏಪ್ರಿಲ್‌ನಲ್ಲಿ ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಆರಂಭವಾದ ಸಂಸತ್ ಚುನಾವಣೆಯು ಭಾರತದ ವಿವಿಧ ರಾಜ್ಯಗಳಲ್ಲಿ 7 ಹಂತಗಳಲ್ಲಿ ನಡೆಯಿತು. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆದಿವೆ. ಇದರಲ್ಲಿ ಆಂಧ್ರಪ್ರದೇಶದಲ್ಲಿ ಸರ್ಕಾರ ಬದಲಾವಣೆಯಾಗಿದೆ.


COMMERCIAL BREAK
SCROLL TO CONTINUE READING

ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಪಿ ವಿರುದ್ಧ ತೆಲುಗು ದೇಶಂ ಪಕ್ಷ, ಜನಸೇನಾ ಪಕ್ಷ ಮತ್ತು ಬಿಜೆಪಿ ಮೈತ್ರಿ ಗುಡುಗಿದ್ದವು. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ನಿನ್ನೆಯಷ್ಟೇ ಸಂಸತ್ ಚುನಾವಣಾ ಫಲಿತಾಂಶದ ಜೊತೆಗೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ಇದರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರ ಕಳೆದುಕೊಂಡಿದ್ದಾರೆ. 


ಇದನ್ನೂ ಓದಿ:ಅತೀ ಶೀಘ್ರದಲ್ಲೇ ತೆರೆಗೆ ಬರುವ ಸಿದ್ಧತೆಯಲ್ಲಿರುವ ‘ಅಪರೇಷನ್ ಲಂಡನ್ ಕೆಫೆ’!


ಜೂನ್ 9 ರಂದು ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಇದೇ ವೇಳೆ ಚಂದ್ರಬಾಬು ನಾಯ್ಡು ಅವರ ಈ ಯಶಸ್ಸಿಗೆ ರಜನಿಕಾಂತ್ ಕಾರಣ ಎಂದು ಹಲವರು ಹೇಳುತ್ತಿದ್ದಾರೆ.


ಹೌದು.. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಾಲಿವುಡ್ ಸೂಪರ್‌ಸ್ಟಾರ್ ನಟ ಎನ್‌ಟಿ ರಾಮರಾವ್‌ ಅವರ ಜನ್ಮ ಶತಮಾನೋತ್ಸವವನ್ನು ಕಳೆದ ವರ್ಷ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ರಜನಿಕಾಂತ್ ಆಗಮಿಸಿದ್ದರು. ಪ್ರಮುಖ ಕೆಲಸವಿದ್ದರೂ ಅದನ್ನು ಬಿಟ್ಟು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಎನ್ ಟಿಆರ್ ಅಳಿಯ ಚಂದ್ರಬಾಬು ನಾಯ್ಡು ಅವರನ್ನು ತಲೈವಾ ಹೊಗಳಿದ್ದರು. 


ಇದನ್ನೂ ಓದಿ:ಡೈರೆಕ್ಟರ್ ಎ.ಪಿ ಅರ್ಜುನ್ ನಿರ್ಮಾಣದ ಸಿನಿಮಾಗೆ ನಟ ಚಿಕ್ಕಣ್ಣ ಹೀರೋ. .


ಚಂದ್ರಬಾಬು ನಾಯ್ಡು ಅವರೊಂದಿಗಿನ 30 ವರ್ಷಗಳ ಸ್ನೇಹದ ಬಗ್ಗೆ ಮಾತನಾಡಿದ್ದ ರಜನಿ, ಚಂದ್ರಬಾಬು ನಾಯ್ಡು ಅವರು ರಾಜಕೀಯ ದಾರ್ಶನಿಕರಾಗಿದ್ದಾರೆ ಅಂತ ಹೊಗಳಿದರು. ಅಲ್ಲದೆ, ತಾವು ಹೈದರಾಬಾದ್‌ಗೆ ಬಂದಾಗಲೆಲ್ಲಾ ನಾಯ್ಡು ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲ ಬಾಬು ಸದಾ ಜನಸೇವೆ ಬಗ್ಗೆ ಚಿಂತಿಸುತ್ತಾರೆ ಎಂದಿದ್ದರು. 


ರಜನಿಕಾಂತ್ ಅವರ ಭಾಷಣಕ್ಕೆ ಆಂಧ್ರಪ್ರದೇಶದ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿತ್ತು. ಅದರಲ್ಲೂ ವೈಎಸ್‌ಆರ್ ಕಾಂಗ್ರೆಸ್‌ನ ನಾಯಕಿ ನಟಿ ರೋಜಾ ರಜನಿಕಾಂತ್ ಹೊಗಳಿಕೆಯನ್ನು ನೇರವಾಗಿ ಟೀಕಿಸಿದ್ದರು. ಇದರ ಬೆನ್ನಲ್ಲೇ ರಜನಿ ಅವರು ಚಂದ್ರಬಾಬು ನಾಯ್ಡು ಅವರನ್ನು ಬೆಂಬಲಿಸಿ ಹೊಗಳಿರುವುದು ಅಲ್ಲಿನ ಆಡಳಿತ ಬದಲಾವಣೆಗೆ ಕಾರಣವಾಗಿರಬಹುದು ಎನ್ನುತ್ತಿದ್ದಾರೆ ತಲೈವಾ ಅಭಿಮಾನಿಗಳು ಹಾಗೂ ರಾಜಕೀಯ ವಿಮರ್ಶಕರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.