AR Rahman: ಖ್ಯಾತ ಸಂಗೀತ ನಿರ್ದೇಶಕ ಎಆರ್‌ ರೆಹಮಾನ್‌ ಆಸ್ಪತ್ರೆಗೆ ದಾಖಲು! ಎಮರ್ಜೆನ್ಸಿ ವಿಭಾಗದಲ್ಲಿ ಚಿಕಿತ್ಸೆ...

AR Rahman Hospitalized: ತಜ್ಞ ವೈದ್ಯರ ತಂಡ ಇಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಆಸ್ಕರ್ ಪ್ರಶಸ್ತಿ ವಿಜೇತ ರೆಹಮಾನ್ ಅವರನ್ನು ಬೆಳಿಗ್ಗೆ 7.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರಿಗೆ ಆಂಜಿಯೋಗ್ರಫಿ, ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್‌ನಂತಹ ಪರೀಕ್ಷೆಗಳನ್ನು ನಡೆಸಲಾಗಿದೆ.

Written by - Bhavishya Shetty | Last Updated : Mar 16, 2025, 10:51 AM IST
    • ಹಿರಿಯ ಸಂಗೀತ ಸಂಯೋಜಕ-ಗಾಯಕ ಎ.ಆರ್ ರೆಹಮಾನ್ ಆಸ್ಪತ್ರೆಗೆ ದಾಖಲು
    • ನೆಚ್ಚಿನ ಸಂಗೀತಗಾರನ ಆರೋಗ್ಯದಲ್ಲಿ ಶೀಘ್ರ ಸುಧಾರಣೆಗಾಗಿ ಪ್ರಾರ್ಥನೆ
    • ಚೆನ್ನೈನ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ
AR Rahman: ಖ್ಯಾತ ಸಂಗೀತ ನಿರ್ದೇಶಕ ಎಆರ್‌ ರೆಹಮಾನ್‌ ಆಸ್ಪತ್ರೆಗೆ ದಾಖಲು! ಎಮರ್ಜೆನ್ಸಿ ವಿಭಾಗದಲ್ಲಿ ಚಿಕಿತ್ಸೆ...
AR Rahman Hospitalized

AR Rahman Hospitalized: ಹಿರಿಯ ಸಂಗೀತ ಸಂಯೋಜಕ-ಗಾಯಕ ಎ.ಆರ್ ರೆಹಮಾನ್ ಅವರಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮಾನ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ.

Add Zee News as a Preferred Source

ಇದನ್ನೂ ಓದಿ:  ಒಂದು ಟೊಮಾಟೊದಿಂದ ಕಡು ಕಪ್ಪಾಗುತ್ತೆ ಬಿಳಿ ಕೂದಲು, ತುರಿಕೆ, ತಲೆಹೊಟ್ಟಿನ ಸಮಸ್ಯೆಯಿಂದಲೂ ಸಿಗುತ್ತೆ ಪರಿಹಾರ

ತಜ್ಞ ವೈದ್ಯರ ತಂಡ ಇಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಆಸ್ಕರ್ ಪ್ರಶಸ್ತಿ ವಿಜೇತ ರೆಹಮಾನ್ ಅವರನ್ನು ಬೆಳಿಗ್ಗೆ 7.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರಿಗೆ ಆಂಜಿಯೋಗ್ರಫಿ, ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್‌ನಂತಹ ಪರೀಕ್ಷೆಗಳನ್ನು ನಡೆಸಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ರೆಹಮಾನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದರು. ಅವರು ಮತ್ತು ಅವರ ಪತ್ನಿ ಸಾಯಿರಾ ಬಾನು 29 ವರ್ಷಗಳ ದಾಂಪತ್ಯದ ನಂತರ ಬೇರ್ಪಡುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ:  ಮಾರ್ಚ್ 29ರಂದು ಮೀನ ರಾಶಿಯಲ್ಲಿ ಶನಿಯ ಸಂಚಾರ: ಈ ಮೂರು ರಾಶಿಗಳಿಗೆ ಅದೃಷ್ಟವೋ ಅದೃಷ್ಟ!!

ವರದಿಯ ಪ್ರಕಾರ, ರೆಹಮಾನ್ ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ್ದ ಸಂದರ್ಭದಲ್ಲಿ ಮೊದಲು ಕುತ್ತಿಗೆಯ ಸುತ್ತ ಮತ್ತು ನಂತರ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ನೋವು ಹೆಚ್ಚಾದಾಗ, ಭಾನುವಾರ ಬೆಳಿಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ಸಂಗೀತಗಾರನ ಆರೋಗ್ಯದಲ್ಲಿ ಶೀಘ್ರ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News