ಬೆಂಗಳೂರು : ಸ್ಯಾಂಡಲ್ ವುಡ್ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮಿದೇವಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಲಕ್ಷ್ಮಿದೇವಿ ಅವರು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಶಕ್ತಿಪ್ರಸಾದ್ ಪತ್ನಿ, ದ್ರುವಸರ್ಜಾ ಅವರ ಅಜ್ಜಿ ಲಕ್ಷ್ಮಿದೇವಿ ಅವರಿಗೆ 85 ವರ್ಷ ವಯಸ್ಸಾಗಿತ್ತು. ಸದ್ಯದಲ್ಲಿಯೇ ಕುಟುಂಬಸ್ಥರು ಅಧಿಕೃತವಾಗಿ ಹೇಳಿಕೆ ನೀಡಲಿದ್ದಾರೆ. 


ಸ್ಯಾಂಡಲ್‌ವುಡ್‌ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಕೆಲ ತಿಂಗಳ ಹಿಂದಷ್ಟೇ ಮಾವನನ್ನ ಕಳೆದುಕೊಂಡಿದ್ರು. ಕನ್ನಡಿಗರ ಪಾಲಿನ ಪ್ರೀತಿಯ ಕಲಾತಪಸ್ವಿ ರಾಜೇಶ್ ಅವರು ಫೆಬ್ರವರಿಯಲ್ಲಿ ನಿಧನರಾಗಿದ್ದರು. ಆ ಬಳಿಕ ಮತ್ತೊಂದು ಆಘಾತಕಾರಿ ಸುದ್ದಿ ಅರ್ಜುನ್ ಸರ್ಜಾ ಅವರಿಗೆ ತೀವ್ರ ಆಘಾತ ನೀಡಿದೆ.


ಅನಾರೋಗ್ಯದ ಹಿನ್ನೆಲೆಯಲ್ಲಿ ಕಲಾತಪಸ್ವಿ ರಾಜೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇದೇ ವರ್ಷದ ಫೆಬ್ರವರಿ 19ರಂದು ನಿಧನರಾಗಿದ್ದರು. ಇದೀಗ ನಟ ಅರ್ಜುನ್‌ ಸರ್ಜಾ ಅವರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಚಿತ್ರರಂಗದ ಗಣ್ಯರು ಲಕ್ಷ್ಮಿದೇವಮ್ಮ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.


ನಟ ಅರ್ಜುನ್ ಸರ್ಜಾ ತಾಯಿ ಹಾಗೂ ನಟ ದ್ರುವ ಸರ್ಜಾ ಅವರ ಅಜ್ಜಿ ಲಕ್ಷ್ಮಿದೇವಮ್ಮ ಅವರ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ಥಿವ ಶರೀರವನ್ನು ಜಯನಗರದ ಅಪೋಲೋ ಆಸ್ಪತ್ರೆಯಿಂದ ಅರ್ಜುನ್‌ ಸರ್ಜಾ ಅವರ ನಿವಾಸಕ್ಕೆ ಶಿಫ್ಟ್‌ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.