ಆಕ್ಷನ್ ಹಿರೋ ಅರ್ಜುನ್ ಸರ್ಜಾ ತಮ್ಮ ಮಗಳು ಐಶ್ವರ್ಯಗಾಗಿ ಚಿತ್ರವೊಂದನ್ನು ನಿರ್ಮಿಸಿ ನಿರ್ದೇಶಿಸಿದ್ದಾರೆ, ಅದೇ 'ಪ್ರೆಮ ಬರಹ'. ಇಂದು ಸಂಜೆ 5 ಗಂಟೆಗೆ ಈ ಚಿತ್ರದ ಟೀಸರ್ ಬಿಡುಗಡೆಗೊಳ್ಳಲಿದೆ. 


COMMERCIAL BREAK
SCROLL TO CONTINUE READING

ಇದೊಂದು ಲವ್ ಸ್ಟೋರಿ. ಪ್ರೇಮ ಬರಹ ಚಿತ್ರವನ್ನು ಆಕ್ಷನ್ ಹೀರೋ ಅರ್ಜುನ್ ಸರ್ಜಾ ತಮ್ಮ ಮಗಳು ಐಶ್ವರ್ಯ ಗಾಗಿ ತಮ್ಮದೇ ಆದ 'ಶ್ರೀರಾಮ್ ಫಿಲಂಸ್ ಇಂಟರ್ನ್ಯಾಷನಲ್' ಬ್ಯಾನರ್ ನಲ್ಲಿ ನಿರ್ಮಿಸಿ ನಿರ್ದೇಶಿಸಿದ್ದಾರೆ. ಟಾಲಿವುಡ್ ಸ್ಟಾರ್ ಡೈರೆಕ್ಟರ್ ಎ.ಆರ್. ಮುರುಗದಾಸ್ ರಿಲೀಸ್ ಮಾಡುವ ನಿರೀಕ್ಷೆ ಇದೆ. 


ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಹಾಗೂ ಚಂದನ್ ಚಿತ್ರದ ನಾಯಕ. ಲಕ್ಷ್ಮೀ, ಸುಹಾಸಿನಿ, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ ಮುಂತಾದ ಕಲಾವಿದರನ್ನು ಕಾಣಬಹುದು. ಇದು ಅರ್ಜುನ್ ಸರ್ಜಾ ಅವರು ಬರೆದು, ನಿರ್ಮಿಸಿ, ನಿರ್ದೇಶಿಸುತ್ತಿರುವ 15ನೇ ಚಿತ್ರ. 


ಕನ್ನಡ ಮತ್ತು ತಮಿಳು ಎರಡೂ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಿರುವುದರಿಂದ ಇಂದೇ ಎರಡೂ ಭಾಷೆಗಳಲ್ಲಿ ಟೀಸರ್ ರಿಲೀಸ್ ಆಗಲಿದೆ.