ನವದೆಹಲಿ :  ಡ್ರಗ್ಸ್ ಪಾರ್ಟಿ (Mumbai drugs case) ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan khan) ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ಇಂದು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಆರ್ಯನ ಖಾನ್ ನ್ನಷ್ಟು ದಿನ ಜೈಲಿನಲ್ಲಿಯೇ ಇರಬೇಕಾಗುತ್ತದೆ.   ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ.   


COMMERCIAL BREAK
SCROLL TO CONTINUE READING

ಅಕ್ಟೋಬರ್ 14 ರಂದು ನಡೆದ ಪ್ರಕರಣದ ವಿಚಾರಣೆಯಲ್ಲಿ, ಮುಂಬೈನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿ.ವಿ.ಪಾಟೀಲ್, ಎಲ್ಲಾ ಪಕ್ಷದವರ ವಾದವನ್ನು ಆಲಿಸಿದ ನಂತರ, ಆರ್ಯನ್ (Aryan khan) ಜಾಮೀನು ವಿಚಾರದ ತೀರ್ಪನ್ನು  ಅಕ್ಟೋಬರ್ 20 ಅಂದರೆ ಇಂದಿಗೆ ಕಾಯ್ದಿರಿಸಿತ್ತು. ಇಂದು ಈ ಬಗ್ಗೆ ತೀರ್ಪು ಪ್ರಕಟಿಸಿದ ನ್ಯಾಯಾಲಯ  ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ. ಇದೀಗ ಜಾಮೀನು ಸಿಗಬಹುದು ಎಂದು ಎದುರು ನೋಡುತ್ತಿದ್ದವರಿಗೆ ನಿರಾಸೆ ಉಂಟಾಗಿದೆ.  


ಇದನ್ನೂ ಓದಿ : ಈ ನಟಿಯ ವಿರುದ್ಧ 50 ಕೋಟಿ ರೂ. ಮಾನಹಾನಿ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ..!


ಅಕ್ಟೋಬರ್ 2 ರಂದು ರೇವ್ ಪಾರ್ಟಿಯ ವೇಳೆ ನಡೆದ ದಾಳಿಯಲ್ಲಿ ಡ್ರಗ್ಸ್ (Drugs) ಪತ್ತೆಯಾದ ನಂತರ ಆರ್ಯನ್ ನನ್ನು ಮೊದಲು ಎನ್ ಸಿಬಿ (NCB) ವಶಕ್ಕೆ ಪಡೆದಿತ್ತು. ಈ ಪ್ರಕರಣದಲ್ಲಿ, ಆರ್ಯನ್ ಜೊತೆಗೆ 8 ಜನರನ್ನು ಬಂಧಿಸಲಾಯಿತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆರ್ಯನ್ ಖಾನ್ ಪ್ರಸ್ತುತ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. 


ಇದನ್ನೂ ಓದಿ : Sharan: ಇದೇ ಮೊದಲ ಬಾರಿಗೆ ಹಾರರ್‌ ಥ್ರಿಲ್ಲರ್‌ ಸಿನಿಮಾದಲ್ಲಿ ನಟ ಶರಣ್‌


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ