ಬೆಂಗಳೂರು: ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಾಯಕ ಆರ್ಯನ್. ಇದೀಗ ಅವರು ದಿ ಭವಾನಿ ಫೈಲ್ಸ್ ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ.
ಈ ಚಿತ್ರದಲ್ಲಿ ನಟನೆ ಜೊತೆಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಜವಾಬ್ದಾರಿ ಹೊತ್ತುಕೊಂಡಿರುವ ಆರ್ಯನ್ ಚಿತ್ರಕ್ಕೆ ದೊಡ್ಮನೆ ಸೊಸೆ ಸಾಥ್ ಕೊಟ್ಟಿದ್ದಾರೆ. ದಿ ಭವಾನಿ ಫೈಲ್ಸ್ ಸಿನಿಮಾದ ಟೈಟಲ್ ಲಾಂಚ್ ಮಾಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: Shivarajkumar: ಯುವಕನ ಸಾಹಸಕ್ಕೆ ಶಿವಣ್ಣ ಫುಲ್ ಫಿದಾ.. ಹಗ್ ಮಾಡಿ ಭೇಷ್ ಎಂದ ಹ್ಯಾಟ್ರಿಕ್ ಹೀರೋ!
ಸದ್ಯ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಮುಂದಿನ ತಿಂಗಳು ಫಸ್ಟ್ ಲುಕ್ ಲಾಂಚ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. 14ನೇ ಶತಮಾನ ‘ದಿ ಭವಾನಿ ಫೈಲ್ಸ್’ ಕಥೆಯನ್ನು ಆರ್ಯನ್ ತಮ್ಮ ಸ್ನೇಹಿತರ ಜೊತೆಗೂಡಿ ನಿರ್ದೇಶಿಸುತ್ತಿದ್ದಾರೆ.
ಇದನ್ನೂ ಓದಿ: Actress Barkha Madan: ಒಂದು ಕಾಲದಲ್ಲಿ ಬಿಕಿನಿಯಲ್ಲಿ ಮಿಂಚಿದ್ದ ಬರ್ಖಾ ಮದನ್; ಇಂದು ಬೌದ್ಧ ಸನ್ಯಾಸಿನಿ..!
ಮೋಹನ್ ಮೆನನ್, ಜೇಕಬ್ ವರ್ಗೀಸ್ ಹಾಗೂ ಆರ್ಯನ್ ಸಿನಿಮಾಗೆ ಚಿತ್ರಕಥೆ ಬರೆದಿದ್ದು, ಚೇತನ್ ಡಿಕ್ರೋಸ್ ಸ್ಟಂಟ್, ಜೋ ಕೋಸ್ಟ್ ಟ್ಯೂನ್ ಹಾಕಿದ್ದಾರೆ. ವೈಟ್ ಹಾರ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ದಿ ಭವಾನಿ ಫೈಲ್ಸ್ ಸಿನಿಮಾವನ್ನು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ನಿರ್ಮಾಣದಲ್ಲಿ ಸಾಥ್ ಕೊಡಲಿದೆ. ಕಲ್ಟ್ ಜಾನರ್ ಈ ಸಿನಿಮಾದ ಉಳಿದ ಸ್ಟಾರ್ ಕಾಸ್ಟ್ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಮಾಹಿತಿ ನೀಡಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.