’ಕನಸೊಂದು ಶುರುವಾಗಿದೆ’ ಸಿನಿಮಾಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್.!

ಮಂಜೇಶ್ ಎರಡನೇ ಹೆಜ್ಜೆಗೆ ಕನಸೊಂದು ಶುರುವಾಗಿದೆ ಎಂಬ ಟೈಟಲ್ ಇಡಲಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸಬರ ಕನಸಿಗೆ ಜೊತೆಯಾಗಿದ್ದಾರೆ. ಕನಸೊಂದು ಶುರುವಾಗಿದೆ ಶೀರ್ಷಿಕೆ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.

Written by - YASHODHA POOJARI | Edited by - Krishna N K | Last Updated : Jan 4, 2024, 12:28 PM IST
  • ಮಂಜೇಶ್ ಎರಡನೇ ಹೆಜ್ಜೆಗೆ ಕನಸೊಂದು ಶುರುವಾಗಿದೆ ಟೈಟಲ್
  • ಶೀರ್ಷಿಕೆ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ ಅಶ್ವಿನಿ ಪುನೀತ್
  • ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.
’ಕನಸೊಂದು ಶುರುವಾಗಿದೆ’ ಸಿನಿಮಾಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್.! title=

Kanasondu Shuruvagide : ‘ಸಹರ’ ಸಿನಿಮಾ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟಿರುವ ಮಂಜೇಶ್ ಭಾಗವತ್ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಸದ್ದಿಲ್ಲದೇ ಎರಡನೇ ಚಿತ್ರ ಶೂಟಿಂಗ್ ಮುಗಿಸಿರುವ ಅವರೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಂಜೇಶ್ ಎರಡನೇ ಹೆಜ್ಜೆಗೆ ಕನಸೊಂದು ಶುರುವಾಗಿದೆ ಎಂಬ ಟೈಟಲ್ ಇಡಲಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸಬರ ಕನಸಿಗೆ ಜೊತೆಯಾಗಿದ್ದಾರೆ. ಕನಸೊಂದು ಶುರುವಾಗಿದೆ ಶೀರ್ಷಿಕೆ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ಕನಸೊಂದು ಶುರುವಾಗಿದೆ ಸಿನಿಮಾ ಮೂಲಕ ಸಂತೋಷ್ ಬಿಲ್ವಾ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದು, ಅವರಿಗೆ ಜೋಡಿಯಾಗಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾಪುರ, ಕುಣಿಗಲ್ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಈಗಾಗಲೇ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.

ಇದನ್ನೂ ಓದಿ: Salaar: ಭಾಕ್ಸಾಫಿಸ್‌ನಲ್ಲಿ ಸಲಾರ್‌ ಅಬ್ಬರ.. ಜೈಲರ್..‌ ಬಾಹುಬಲಿ.. ದಾಖಲೆಗಳನ್ನು ಉಢೀಸ್‌ ಮಾಡಿದ ಪ್ರಭಾಸ್‌! 

KKR ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ಎಸ್ ಕನಸೊಂದು ಶುರುವಾಗಿದೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲೋಕೇಂದ್ರ ಸೂರ್ಯ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿಎಸ್ ಗೌಡ ಸಂಕಲನ ಚಿತ್ರಕ್ಕಿದೆ. ಶಶಾಂಕ್, ಸಿಂಪಲ್ ಸುನಿ ಹಾಗೂ ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಂ, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News