Asuraru movie : ಈ ವೇಳೆ ನಿರ್ದೇಶಕ ರಾಜ್ ಬಹದ್ದೂರ್ ಮಾತನಾಡಿ, ಈ ಹಿಂದೆ ನಾನು ಹುಲಿಬೇಟೆ ಸಿನಿಮಾ ಮಾಡಿದ್ದೆ. ತಾತಾ ಹೇಳುತ್ತಿದ್ದ ಕಥೆ ಇದು. ಚಿಕ್ಕಂದಿನಿಂದ್ದಾಗ ಕಥೆ ಕೇಳಿ ರೋಮಾಂಚನವಾಗುತ್ತಿತ್ತು. ಅಂದು ನನಗೆ ತಲೆಯಲ್ಲಿತ್ತು. ಹಿಂದೆ ನಮಗೆ ಗೊತ್ತಿಲ್ಲದ ವಿಷಯ ತುಂಬಾ ನಡೆದಿದೆ. ಅಂತಹ ವಿಷಯವನ್ನು ಜನರಿಗೆ ಪರಿಚಯಸಬೇಕು ಎಂದಾಗ ಅಸುರರು ಸಿನಿಮಾ ಮಾಡಿದ್ದು. ಅಸುರರು ಅಂದರೆ ರಾಕ್ಷಸರರು. ಇವರು ಬೇರೆ. ಇವರು ಊರಿನ ಜನಗಳ ಮಧ್ಯೆ ಇರುತ್ತಿರಲಿಲ್ಲ. ಇವರ ಕೆಲಸ ಕಳ್ಳತನ ದರೋಡೆ ಮಾಡುವುದು. ಅವರೇ ಅಸುರರು ಎಂದು ತಿಳಿಸಿದರು. 


COMMERCIAL BREAK
SCROLL TO CONTINUE READING

ನಾಯಕ ತಮ್ಮಣ್ಣ ಮಾತನಾಡಿ, ಸಿನಿಮಾ ಇಲ್ಲಿವರೆಗೂ ಬರಲು ಕಾರಣ ಇಡೀ ಸಿನಿಮಾ ತಂಡ.. ಎಲ್ಲರೂ ಎಲ್ಲಾ ಕೆಲಸ ಮಾಡಿದ್ದಾರೆ. ನವೆಂಬರ್ ಒಂದು ಬಿಡುಗಡೆ ಮಾಡಲು ತಯಾರಿ ನಡೆಸಿದ್ದೇವೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿದೆ ಎಂದರು.


ಇದನ್ನೂ ಓದಿ:ದೀಪಿಕಾ-ರಣವೀರ್‌ ಮಗಳಿಗೆ ದುಬೈನಲ್ಲಿ ಆಟಿಕೆ ಖರೀದಿಸಿದ ಖ್ಯಾತ ನಟಿ! ಯಾರು ಗೊತ್ತಾ? ವಿಡಿಯೋ ನೋಡಿ


ಅಸುರರು ಚಿತ್ರಕ್ಕೆ ರಾಜ್ ಬಹದ್ದೂರ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದಾರೆ. ಅಲ್ಲದೇ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ರಾಜ್ ಬಹದ್ದೂರ್ ಜೊತೆಯಲ್ಲಿ ರಾಹುಲ್ ಗಾಯಕವಾಡ, ತಮ್ಮಣ್ಣ ಟಿ.ಕೆ., ತಿಪ್ಪಣ್ಣ ಟಿ.ಎಸ್, ಮಲ್ಲಿಕಾರ್ಜುನ್ ಮಿಮಿಕ್ರಿ, ಸುಪ್ರಿತಾ ರಾಜ್ ತಾರಾಬಳಗದಲ್ಲಿದ್ದಾರೆ. 


ರಾಜ್ ಬಹದ್ದೂರ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ನಿರ್ಮಾಣವಾಗಿರುವ ಅಸುರರು ಸಿನಿಮಾಗೆ ಸುರೇಶ್ ಅರಸ್ ಸಂಕಲನ, ಸುಭಾಷ್ ಸಂಗೀತ, ನವೀನ್ ಸೂರ್ಯ ಛಾಯಾಗ್ರಹಣ ಒದಗಿಸಿದ್ದಾರೆ. ನೈಜ ಘಟನೆಯಾಧಾರಿತ ಅಸುರರು ಸಿನಿಮಾದಲ್ಲಿ ದರೋಡೆ ಕಥೆಯನ್ನು ಕಟ್ಟಿಕೊಡಲಾಗಿದೆ. ಟೀಸರ್ ಮೂಲಕ ಪ್ರಚಾರ ಕಾರ್ಯ ಪ್ರಾರಂಭಿಸಿರುವ ಚಿತ್ರತಂಡ ನವೆಂಬರ್ 1ಕ್ಕೆ ಸಿನಿಮಾವನ್ನು ತೆರೆಗೆ ತರಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.