ಟ್ರೇಲರ್’ನಲ್ಲೇ ಕುತೂಹಲ ಮೂಡಿಸಿದ ‘ಅವತಾರ ಪುರುಷ 2’: ಬಹುನಿರೀಕ್ಷಿತ ಸಿನಿಮಾ ಏ.5ರಂದು ತೆರೆಗೆ

Avatar Purush 2 Release Date: ನಟ ನೆನಪಿರಲಿ ಪ್ರೇಮ್, ರಿಷಿ, ವಿಕ್ಕಿ ವರುಣ್, ಪ್ರವೀಣ್ ತೇಜ್ ಹಾಗೂ ನಿರ್ದೇಶಕ ಸಂತು ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Written by - YASHODHA POOJARI | Last Updated : Apr 2, 2024, 06:11 PM IST
    • ಅವತಾರ ಪುರುಷ 2 ಚಿತ್ರದ ಟ್ರೇಲರ್ ಬಿಡುಗಡೆ
    • ಶರಣ್ ನಾಯಕರಾಗಿ ನಟಿಸಿರುವ ಅವತಾರ ಪುರುಷ 2 ಚಿತ್ರ
    • ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ-ಸಿಂಪಲ್ ಸುನಿ ನಿರ್ದೇಶನ
ಟ್ರೇಲರ್’ನಲ್ಲೇ ಕುತೂಹಲ ಮೂಡಿಸಿದ ‘ಅವತಾರ ಪುರುಷ 2’: ಬಹುನಿರೀಕ್ಷಿತ ಸಿನಿಮಾ ಏ.5ರಂದು ತೆರೆಗೆ  title=
Avatar Purush 2

Avatar Purush 2: ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ ಅವತಾರ ಪುರುಷ 2 ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು.

ನಟ ನೆನಪಿರಲಿ ಪ್ರೇಮ್, ರಿಷಿ, ವಿಕ್ಕಿ ವರುಣ್, ಪ್ರವೀಣ್ ತೇಜ್ ಹಾಗೂ ನಿರ್ದೇಶಕ ಸಂತು ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಇದನ್ನೂ ಓದಿ: Viral Video: ಮೈದಾನದೊಳಗೆ ಅಭಿಮಾನಿ ನುಗ್ಗಿದ್ದಕ್ಕೆ ಬೆಚ್ಚಿಬಿದ್ದ ರೋಹಿತ್‌ ಶರ್ಮಾ!

ಅವತಾರ ಪುರುಷ ಮೊದಲ ಭಾಗವನ್ನು ಚಿತ್ರಮಂದಿರ, ಓಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿ ಈ ಚಿತ್ರದ ಎರಡನೇ ಭಾಗವನ್ನು ನೋಡಿ ಯಶಸ್ವಿಗೊಳಿಸಿ. ಮೊದಲ ಭಾಗವನ್ನು ನೋಡಿದವರಿಗೆ ಹಾಗೂ ನೋಡದವರಿಗೆ ಇಬ್ಬರಿಗೂ ಭಾಗ 2 ಅರ್ಥವಾಗುತ್ತದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಸಿಂಪಲ್ ಸುನಿ.

ಕನ್ನಡ ಚಿತ್ರಗಳಲ್ಲಿ ಗುಣಮಟ್ಟ ಕಡಿಮೆ ಎಂದು ಕೆಲವರು ಹೇಳುತ್ತಾರೆ. ಆದರೆ ನಮ್ಮ ಚಿತ್ರದ ಟ್ರೇಲರ್ ನೋಡಿದರೆ, ಚಿತ್ರ ಹೇಗೆ ಬಂದಿರಬಹುದು ಎಂದು ಎಲ್ಲರಿಗೂ ತಿಳಿಯುತ್ತದೆ. ಯಾವುದೇ ಕೊರತೆಯಿಲ್ಲದೆ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದೇವೆ‌. ಏಪ್ರಿಲ್ 5 ಚಿತ್ರ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ.               

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ಮಾಪಕ ಪುಷ್ಕರ್ ಹಾಗೂ ನಿರ್ದೇಶಕ ಸುನಿ ಅವರ ಜೊತೆ ಕೆಲಸ ಮಾಡಿದ್ದು ಖುಷಿಯಾಗಿದೆ. ಸುನಿ ಅವರು ಚಿತ್ರದ ಕಥೆ ಹೇಳುತ್ತೇನೆ ಎಂದಾಗ ಕಾಮಿಡಿ ಜಾನರ್ ನ ಕಥೆ ಅಂದುಕೊಂಡಿದ್ದೆ. ಆದರೆ ಅವರು ಇದೊಂದು ವಿಭಿನ್ನ ಕಥೆ. ಈ ಕಥೆಯಲ್ಲಿ ಕಾಮಿಡಿ ಕೂಡ ಇರುತ್ತದೆ ಎಂದರು. ನನಗೂ ಬೇರೆಬೇರೆ ತರಹದ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಆಸೆ. ಹಾಗಾಗಿ ಈ ಚಿತ್ರದ ಪಾತ್ರ ಇಷ್ಟವಾಯಿತು. ಚಿತ್ರ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಮೂಡಿಬಂದಿದೆ. ಎಲ್ಲರೂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ ಎನ್ನುತ್ತಾರೆ ನಟ ಶರಣ್.                    

ನಾನು ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿದ್ದಾಗ "ಅವತಾರ ಪುರುಷ 2" ಚಿತ್ರ ಯಾವಾಗ ಬಿಡುಗಡೆ ಎಂದು ಕೇಳುತ್ತಿದ್ದರು. ಜನರಿಗೆ ಈ ಚಿತ್ರದ ಬಗ್ಗೆ ಅಷ್ಟು ಕುತೂಹಲವಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿದೆ ಎಂದು ನಟಿ ಆಶಿಕಾ ರಂಗನಾಥ್ ತಿಳಿಸಿದರು. ವಿತರಕ ಮೋಹನ್ ಸೇರಿದಂತೆ ಅನೇಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಸತತ ಸೋಲಿನ ಬಳಿಕ ಅಭಿಮಾನಿಗಳಿಗೆ ಹೀಗೊಂದು ಪ್ರಮಾಣ ಮಾಡಿದ MI ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ!

ಶರಣ್, ಆಶಿಕಾ ರಂಗನಾಥ್, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ಸಾಧುಕೋಕಿಲ, ಸುಧಾರಾಣಿ, ಭವ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News