ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಟಾಪನೆ ದಿನದಂದೇ ಅಂಜನಾದ್ರಿ ಬೆಟ್ಟದಲ್ಲಿ "ಅಯೋಧ್ಯಾ ರಾಮ" ಚಿತ್ರಕ್ಕೆ ಚಾಲನೆ!

Ayodhya Ram: ಜನವರಿ 22 ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆಯಾದ ಪರ್ವದಿನ. ಅದೇ ಸುಮೂಹರ್ತದಲ್ಲಿ ಆಂಜನೇಯನ ಜನ್ಮಭೂಮಿಯಾದ ಅಂಜನಾದ್ರಿಯಲ್ಲಿ "ಅಯೋಧ್ಯಾ ರಾಮ" ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಶಾಸಕ ಗಾಲಿ ಜನಾರ್ದನ ರೆಡ್ಡಿ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.   

Written by - YASHODHA POOJARI | Last Updated : Jan 23, 2024, 04:04 PM IST
  • ಇಂದಿನಿಂದ ಈ ಪೌರಾಣಿಕ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
  • ಕನ್ನಡ ಸೇರಿದಂತೆ ಹನ್ನೆರಡು ಭಾಷೆಗಳಲ್ಲಿ ಈ ಚಿತ್ರ ಬರಲಿದೆ.
  • ವಿಕ್ರಮ್ ಜೋಶಿ ಈ ಚಿತ್ರದ ನಾಯಕನಾಗಿ ಹಾಗೂ ಶ್ರೀಲತ ನಾಯಕಿಯಾಗಿ ನಟಿಸುತ್ತಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಟಾಪನೆ ದಿನದಂದೇ ಅಂಜನಾದ್ರಿ ಬೆಟ್ಟದಲ್ಲಿ "ಅಯೋಧ್ಯಾ ರಾಮ" ಚಿತ್ರಕ್ಕೆ ಚಾಲನೆ! title=

ಈ ಹಿಂದೆ "ಶ್ರೀಜಗನ್ನಾಥ ದಾಸರು", " ಶ್ರೀ ಪ್ರಸನ್ನವೆಂಕಟದಾಸರು" ಸೇರಿದಂತೆ ಅನೇಕ ದಾಸವರೇಣ್ಯರ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಜನಪ್ರಿಯರಾಗಿರುವ ಡಾ|| ಮಧುಸೂದನ್ ಹವಾಲ್ದಾರ್ ತಮ್ಮ ಮಾತಾಂಬುಜ ಮೂವೀಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ ನಿರ್ದೇಶನವನ್ನು ಮಾಡುತ್ತಿದ್ದಾರೆ. 

ಇದನ್ನೂ ಓದಿ-ಒಂದು ಕಾಲದಲ್ಲಿ 60 ರೂಪಾಯಿಗೂ ಕಷ್ಟಪಟ್ಟಿದ್ದ ಈತ ಸದ್ಯ ಖ್ಯಾತ ಬಿಗ್‌ಬಾಸ್‌ ಸ್ಪರ್ಧಿ!

ಇಂದಿನಿಂದ  ಈ ಪೌರಾಣಿಕ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಕನ್ನಡ ಸೇರಿದಂತೆ ಹನ್ನೆರಡು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ವಿಕ್ರಮ್ ಜೋಶಿ ಈ ಚಿತ್ರದ ನಾಯಕನಾಗಿ ಹಾಗೂ ಶ್ರೀಲತ ನಾಯಕಿಯಾಗಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಚಿತ್ರರಂಗದ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. 

ಇದನ್ನೂ ಓದಿ-42ರಲ್ಲಿ ಎರಡನೇ ಮದುವೆಯಾದ ಸ್ಟಾರ್‌ ನಟಿ.. ಆದರೆ ಒಮ್ಮೆಯೂ ತಂದೆಯಿಂದ ಕನ್ಯಾದಾನ ಮಾಡಿಸಿಕೊಳ್ಳಲಿಲ್ಲ!

ವಿಜಯ್ ಕೃಷ್ಣ ಸಂಗೀತ ನಿರ್ದೇಶನ, ನಾರಾಯಣ್ ಛಾಯಾಗ್ರಹಣ, ಆರ್ ಡಿ ರವಿ ಅವರ ಸಂಕಲನವಿರುವ "ಅಯೋಧ್ಯಾ ರಾಮ" ಚಿತ್ರಕ್ಕೆ ತೀರ್ಥರಾಜ್ ಡಿ ಹಾಗೂ ರವಿಶಂಕರ್ ಸಹ ನಿರ್ಮಾಣವಿದೆ. ಪ್ರಶಾಂತ್ ಕುಷ್ಟಗಿ ಅವರ ಸಹಕಾರವಿರುವ ಈ ಚಿತ್ರವನ್ನು ಹನ್ನೆರಡು ಭಾಷೆಗಳಲ್ಲಿ ಒಂದು ವರ್ಷದಲ್ಲಿ ಬಿಡುಗಡೆ ಮಾಡುವ ಯೋಜನೆಯಿದೆ ಎಂದು ನಿರ್ದೇಶಕ ಡಾ|| ಮಧುಸೂದನ್ ಹವಾಲ್ದಾರ್ ತಿಳಿದಿದ್ದರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News