ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ 'ಬೈರಾಗಿ' ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್‌ವುಡ್ 'ಭೀಮ'ನಿಂದ ಅನಾವರಣಗೊಳಿಸಿದೆ ಚಿತ್ರತಂಡ. 


COMMERCIAL BREAK
SCROLL TO CONTINUE READING

ಬೈರಾಗಿ ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು, ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ.


ಇದನ್ನೂ ಓದಿ : Head Bush Movie : ಡಾಲಿ ಧನಂಜಯ 'ಹೆಡ್ ಬುಶ್' ಸಿನಿಮಾ ಬಿಡುಗಡೆಗೆ ಎದುರಾಯ್ತು ಕಂಟಕ!


'ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ..'


'ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ...' ಎಂಬ ಹಾಡನ್ನು ಅಕ್ಷಯ ತೃತೀಯ ವಿಶೇಷ ದಿನದಂದು ವಿಜಯ್ ಕುಮಾರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 'ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ' ಅನ್ನೋದು ವಿಜಿ ಮಾತು.


'ನೂರಾರು ಡಾನ್ಸರ್ಸ್, ಬೃಹತ್ ಸೆಟ್, ಕಲರ್‌ಫುಲ್ ಕಾಸ್ಟ್ಯೂಮ್‌ನಲ್ಲಿ ಶಿವಣ್ಣಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನ್ನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡಮಟ್ಟದಲ್ಲಿ ಈ ಹಾಡು ಮೂಡಿಬಂದಿದೆ' ಎನ್ನುತ್ತಾರೆ ನಿರ್ಮಾಪಕ ಕೃಷ್ಣ ಸಾರ್ಥಕ್. 


ಇದನ್ನೂ ಓದಿ : ಮತ್ತೆ ತೆರೆ ಮೇಲೆ ಮೋಹಕ ತಾರೆ ರಮ್ಯಾ...ಯಾವುದು ಆ ಸಿನಿಮಾ..!?


ವಿಜಯ್ ಮಿಲ್ಟನ್‌ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಈ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಒದಗಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಈ ಚಿತ್ರಕ್ಕಿದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ 'ಬೈರಾಗಿ' ನಿರ್ಮಿಸಿದ್ದಾರೆ. ರಾಜ್ಯಾದ್ಯಂತ ಜಗದೀಶ್ ಗೌಡ ಈ ಸಿನಿಮಾವನ್ನು ವಿತರಣೆ ಮಾಡಲಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.