ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ "ಬನಾರಸ್" ಪ್ರೀ ರಿಲೀಸ್ ಇವೆಂಟ್

Banaras pre release event : ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. 

Written by - YASHODHA POOJARI | Edited by - Chetana Devarmani | Last Updated : Oct 19, 2022, 05:26 PM IST
  • "ಬನಾರಸ್" ಚಿತ್ರದ ಪ್ರೀ ರಿಲೀಸ್ ಇವೆಂಟ್
  • ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ
  • ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆಯಲಿರುವ ಕಾರ್ಯಕ್ರಮ
ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ "ಬನಾರಸ್" ಪ್ರೀ ರಿಲೀಸ್ ಇವೆಂಟ್  title=
ಬನಾರಸ್‌

Banaras pre release event : ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ, ಝೈದ್ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಇದೇ ನವೆಂಬರ್ ೪ರಂದು ಈ ಚಿತ್ರ ದೇಶಾದ್ಯಂತ ತೆರೆಗಾಣಲಿದೆ. ಈಗಾಗಲೇ ಹಾಡುಗಳು, ಟ್ರೈಲರ್ ಸೇರಿದಂತೆ ನಾನಾ ದಿಕ್ಕುಗಳಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಬನಾರಸ್, ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಇದೇ ಬಿಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ಚಿತ್ರತಂಡ ಆಯೋಜಿಸಿದೆ. 

ಇದನ್ನೂ ಓದಿ : ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂಬ ಹೇಳಿಕೆಗೆ ನಟ ಚೇತನ್‌ ಸ್ಪಷ್ಟನೆ

ಲೇಟೆಸ್ಟ್ ವಿಚಾರವೆಂದರೆ, ಈ ಇವೆಂಟಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದಾರೆ. ಬನಾರಸ್ ಪ್ರೀ ರಿಲೀಸ್ ಇವೆಂಟ್ ಇದೇ 22ನೇ ತಾರೀಕಿನಂದು ಸಂಜೆ 7.30ಕ್ಕೆ ಸರಿಯಾಗಿ, ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್‌ನಲ್ಲಿ ನಡೆಯಲಿದೆ. ಸಾವಿರಾರು ಜನ ಸೇರಲಿರುವ ಈ ಅದ್ದೂರಿ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ಅಭಿಷೇಕ್ ಅಂಬರೀಶ್ ಮುಂತಾದವರೂ ಪಾಲ್ಗೊಳ್ಳಲಿದ್ದಾರೆ.

ನಿರ್ದೇಶಕ ಜಯತೀರ್ಥ, ಝೈದ್ ಖಾನ್, ಸೋನಲ್ ಮೊಂತೇರೋ ಸೇರಿದಂತೆ ಒಂದಿಡೀ ಚಿತ್ರತಂಡ ಭಾಗಿಯಾಗಲಿದೆ. ಈ ಸಂದರ್ಭದಲ್ಲಿ ಬನಾರಸ್ ಬಗೆಗಿನ ಮತ್ತಷ್ಟು ಬೆರಗುಗಳು ಅನಾವರಣಗೊಳ್ಳಲಿವೆ.

ಇದನ್ನೂ ಓದಿ : ಪತ್ನಿ ಶಿಲ್ಪಾ ಶೆಟ್ಟಿಯಿಂದಲೇ ನನಗೆ ಕುಖ್ಯಾತಿ ಸಿಕ್ತು’: ರಾಜ್ ಕುಂದ್ರಾ ನೇರ ಆರೋಪ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News