ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
Bengaluru International Film Festival: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು.
Bengaluru International Film Festival: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ- BBK 10: ಬಿಗ್‌ಬಾಸ್ ಮನೆಯಲ್ಲಿ ಗಂಡಸರದ್ದೇ ದರ್ಬಾರ್..! ಮಹಿಳೆಯರಿಗೆ ಸಿಕ್ತಿಲ್ವಾ ಅವಕಾಶ?
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.
ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿ- ಆಮಿರ್ ಖಾನ್ ಮನೆಯಲ್ಲಿ ಮದುವೆ ಸಂಭ್ರಮ : ಇರಾ ಖಾನ್ ಮದುವೆ ಶಾಸ್ತ್ರಗಳ ಫೋಟೋ ವೈರಲ್
ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿತ್ತು. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವವನ್ನು ಯ ಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.