ಬೆಂಗಳೂರು ಕಂಬಳ: ದೀಪ ಬೆಳಗಿ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್!
Bangalore Kambala: ಕರಾವಳಿ ಕಂಬಳ ಉತ್ಸವ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಈ ʼಬೆಂಗಳೂರು ಕಂಬಳʼಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿಶೇಷ ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ.
Kambala In Bangalore: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನವೆಂಬರ್ 25 ರಂದು ಹಾಗೂ 26 ರಂದು ಕಂಬಳ ನಡೆಯುತಿದ್ದು, ಈ ʼಬೆಂಗಳೂರು ಕಂಬಳʼಕ್ಕೆ ಮೊದಲ ಕೆರೆ ಉದ್ಘಾಟನೆ ನಡೆದಿದೆ. ಇಂದು ಈ ಸಮಾರಂಭದಲ್ಲಿ ಪಾಲುಗೊಂಡ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿಶೇಷ ದೀಪ ಬೆಳಗಿಸಿ, ಗಂಗಾರಾತಿ ಮಾಡುವುದರ ಮೂಲಕ ಕರೆಯನ್ನು ಉದ್ಘಾಟನೆ ಮಾಡಲಾಗಿದೆ.
ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳಕ್ಕೆ ಸಂಪೂರ್ಣವಾಗಿ ಸಿದ್ಧಗೊಂಡಿದೆ.
ಇದನ್ನೂ ಓದಿ: Kantara Prequel: ʼಇದು ಬರಿ ಬೆಳಕಲ್ಲ, ದರ್ಶನʼ.. ಕಾಂತಾರ ಫಸ್ಟ್ ಲುಕ್ ರಿಲೀಸ್ ಡೇಟ್ ಫಿಕ್ಸ್..!
ಈ ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್, ಕಾಂತಾರ ಹೀರೋ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ವಿವೇಕ್ ಒಬೆರಾಯ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದು, ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ.
ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.