Riya barde : ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಥಾಣೆ ಜಿಲ್ಲೆಯ ಎಂಟು ಬಾಂಗ್ಲಾದೇಶಿ ಮಹಿಳೆಯರನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಬಂಧಿತರಲ್ಲಿ ಪೋರ್ನ್ ಸ್ಟಾರ್ ರಿಯಾ ಅರವಿಂದ್ ಬಾರ್ಡೆ ಕೂಡ ಸೇರಿದ್ದಾರೆ. ರಿಯಾ ಅಂಬರ್ ನಾಥ್ ಪಟ್ಟಣದಲ್ಲಿ ನಕಲಿ ದಾಖಲೆಗಳೊಂದಿಗೆ ವಾಸಿಸುತ್ತಿದ್ದರು.
7 ಮಹಿಳೆಯರನ್ನು ನವೀ ಮುಂಬೈನಿಂದ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಎನ್ಆರ್‌ಐ ಪೊಲೀಸರ ತಂಡವು ಮಂಗಳವಾರ ಸಂಜೆ ನವೀ ಮುಂಬೈನ ಕರವೆ ಗ್ರಾಮದ ವಸತಿ ಆವರಣದಲ್ಲಿ ದಾಳಿ ನಡೆಸಿತು. ಈ ವೇಳೆ ದಾಖಲೆಗಳಿಲ್ಲದೆ ಎರಡು ರೂಮ್‌ಗಳಲ್ಲಿ ವಾಸಿಸುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯರನ್ನು ಅಧಿಕಾರಿಗಳು ವಶಕ್ಕೆ ಪಡೆದರು.
ಇದನ್ನೂ ಓದಿ:ʼನಾವಿಬ್ಬರೂ.. ʼ ಕೊನೆಗೂ ಶುಭ್ಮನ್ ಗಿಲ್ ಜೊತೆಗಿನ ರಿಲೇಷನ್‌ಶಿಪ್ ಬಗ್ಗೆ ಮೌನ ಮುರಿದ ಖ್ಯಾತ ನಟಿ!!
ಮನೆಗೆಲಸಗಾರರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು ಎಂದು ಎನ್ಆರ್ಐ ಪೊಲೀಸ್ ಠಾಣೆಯ ಅಧಿಕಾರಿಗಳು ವರದಿ ಮಾಡಿದ್ದಾರೆ. ಪಾಸ್ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1950 ಮತ್ತು ವಿದೇಶಿಯರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮತ್ತೊಂದು ಘಟನೆಯಲ್ಲಿ ಪೊಲೀಸರು ರಿಯಾ ಬಾರ್ಡೆ ಅವರನ್ನು ಗುರುವಾರ ಬಂಧಿಸಿದ್ದಾರೆ. ಈಕೆ ನಕಲಿ ದಾಖಲೆಗಳೊಂದಿಗೆ ಅಂಬರ್‌ನಾಥ್‌ನಲ್ಲಿ ವಾಸಿಸುತ್ತಿದ್ದಳು. ರಿಯಾ ಬಾರ್ಡೆ ವಿರುದ್ಧ ವಿದೇಶಿ ಕಾಯಿದೆಯ ಜೊತೆಗೆ ವಂಚನೆ, ನಕಲಿ ದಾಖಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಬ್ ಇನ್‌ಸ್ಪೆಕ್ಟರ್ ಸಂಗ್ರಾಮ್ ಮಲ್ಕರ್ ಖಚಿತಪಡಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (BNS) ಜುಲೈ 1, 2024 ರಂದು ಜಾರಿಗೆ ಬರುವ ಮೊದಲು ವಂಚನೆ ಮತ್ತು ನಕಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಬಾರ್ಡೆ ತನ್ನ ಸಹಚರರೊಬ್ಬರಿಗೆ ಬಾಂಗ್ಲಾದೇಶದಿಂದ ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಿಂದ ಜನನ ಪ್ರಮಾಣಪತ್ರವನ್ನು ಪಡೆಯಲು ಸಂಚು ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಈ ನಕಲಿ ದಾಖಲೆಗಳನ್ನು ಬಳಸಿ, ಇತರ ಆರೋಪಿಗಳಿಗೆ ಶಿಕ್ಷಣ ಪ್ರಮಾಣಪತ್ರ ಮತ್ತು ಪಾಸ್‌ಪೋರ್ಟ್‌ಗಳನ್ನು ಪಡೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.