Chinnara Chandra : ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ರವರ "ಚಿಣ್ಣರ ಚಂದ್ರ"

Chinnara Chandra : "ಚಿಣ್ಣರ ಚಂದ್ರ" ಚಿತ್ರವು ಶಿಕ್ಷಣದ ಮಹತ್ವವನ್ನು ಸಾದರ ಪಡಿಸುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ. 

Written by - YASHODHA POOJARI | Last Updated : Nov 18, 2023, 10:23 AM IST
  • ಅಹಮದಾಬಾದ್ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವ
  • ಬರಗೂರು ರಾಮಚಂದ್ರಪ್ಪ ನಿರ್ದೇಶನದ "ಚಿಣ್ಣರ ಚಂದ್ರ"
  • ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆಯಾದ "ಚಿಣ್ಣರ ಚಂದ್ರ"
Chinnara Chandra : ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ರವರ "ಚಿಣ್ಣರ ಚಂದ್ರ"  title=
ಚಿಣ್ಣರ ಚಂದ್ರ

ಬೆಂಗಳೂರು : ಅಹಮದಾಬಾದ್ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ "ಚಿಣ್ಣರ ಚಂದ್ರ" ಚಿತ್ರ ಅಧಿಕೃತವಾಗಿ ಆಯ್ಕೆಯಾಗಿದೆ. ಸ್ಪರ್ಧಾ ವಿಭಾಗದಲ್ಲಿ ಪ್ರವೇಶ ಪಡೆದಿದೆ. ಈ ಚಿತ್ರವು ಈಗಾಗಲೇ ಮೆಲ್ಬರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಸ್ಪರ್ಧೆಯ ಅಂತಿಮ ಹಂತ ತಲುಪಿದೆ. 

"ಚಿಣ್ಣರ ಚಂದ್ರ" ಚಿತ್ರವು ಶಿಕ್ಷಣದ ಮಹತ್ವವನ್ನು ಸಾದರ ಪಡಿಸುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ. ಜೊತೆಗೆ ಜನಪದ ಕಥೆಗಳು ಮಕ್ಕಳ ಮನಸ್ಸಿನ ಭಾಗವಾಗುವುದನ್ನು ಚಿತ್ರಿಸುತ್ತದೆ. 

ಇದನ್ನೂ ಓದಿ : ಮುದ್ದಾಗಿರುವ ಈ ಮಗು ಯಾರು ಗೊತ್ತಾ? ಸದ್ಯ ಪಡ್ಡೆಹೈಕ್ಳ ನ್ಯಾಷನಲ್‌ ಕ್ರಷ್‌ ಈ ನಟಿ 

ಬರಗೂರರ "ಅಡಗೂಲಜ್ಜಿ" ಎಂಬ ಕಾದಂಬರಿಯನ್ನು ಆಧರಿಸಿರುವ ಈ ಚಿತ್ರವನ್ನು ಜಿ.ಎಸ್ ಗೋವಿಂದರಾಜು (ರಾಜಶೇಖರ್) ನಿರ್ಮಿಸಿದ್ದಾರೆ. ತಾರಾಗಣದಲ್ಲಿ ಆಕಾಂಕ್ಷ್ ಬರಗೂರ್, ನಿಕ್ಷೇಪ, ಷಡ್ಜ, ಈಶಾನ್, ಅಭಿನವ್ ನಾಗ್, ಸುಂದರರಾಜ್, ರೇಖಾ, ವತ್ಸಲ ಮೋಹನ್, ರಾಧ ರಾಮಚಂದ್ರ, ರಾಘವ, ರಾಜಪ್ಪ ದಳವಾಯಿ, ಸುಂದರರಾಜ್ ಅರಸು, ವೆಂಕಟರಾಜು, ಹಂಸ ಮುಂತಾದವರಿದ್ದಾರೆ.

ಸಂಕಲನಕಾರರಾಗಿ ಸುರೇಶ್ ಅರಸು, ಛಾಯಾಗ್ರಾಹಕರಾಗಿ ನಾಗರಾಜ್ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತ ಮಲ್ನಾಡ್ ಕೆಲಸ ಮಾಡಿದ್ದಾರೆ. ಸಹ ನಿರ್ದೇಶಕರು ನಟರಾಜ್ ಶಿವ ಮತ್ತು ಪ್ರವೀಣ್. "ಚಿಣ್ಣರ ಚಂದ್ರ" ಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಲ್ಲದೇ ಶಾಲಾ ಮಕ್ಕಳಿಗೆ ರಾಜ್ಯದಾದ್ಯಂತ ಪ್ರದರ್ಶಿಸುವ ಉದ್ದೇಶ ಹೊಂದಲಾಗಿದೆ.

ಇದನ್ನೂ ಓದಿ : ನಟನೆ.. ಸಿನಿಮಾ ನಿರ್ಮಾಣ.. ರಾಜಕೀಯದಲ್ಲಿ ಬ್ಯುಸಿಯಾಗಿರುವ ನಟಿ ಖುಷ್ಬೂ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News