ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರಲ್ಲಿ ವಿಶೇಷ ಪ್ರೀತಿ ಇದೆ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ  ಬಯಲುಸೀಮೆ ಸಿನಿಮಾ ಶೂಟಿಂಗ್ ಮುಗಿಸಿಕೊಂಡು, ನಿನ್ನೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆಗೆ ಮಾಡಿತು. ಇಡೀ ಸಿನಿಮಾ ತಂಡ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅನುಭವ ಹಂಚಿಕೊಂಡಿತು.


COMMERCIAL BREAK
SCROLL TO CONTINUE READING

ನಿರ್ದೇಶಕರು ಏನೇ ವಿಷ್ಯುವಲೈಸೇಷನ್ ಮಾಡಿದರೆ ಅದಕ್ಕೆ ನಿರ್ಮಾಪಕರ ಸಪೋರ್ಟ್ ಬಹಳ‌ ಮುಖ್ಯ. ಪ್ರತಿಯೊಬ್ಬರೂ ಈ ಸಿನಿಮಾಗೆ ಬಹಳಷ್ಟು ಶ್ರಮಿಸಿದ್ದಾರೆ. ನಾಗಾಭರಣ ಅವರ ಜೊತೆ ಆಕ್ಟ್ ಮಾಡಿರೋದು ಖುಷಿ ಕೊಟ್ಟಿದೆ ಎಂದು ಆರ್ಮುಗಂ ರವಿಶಂಕರ್ ತಮ್ಮ ಅನುಭವ ಹಂಚಿಕೊಂಡರು.


[[{"fid":"237300","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ : ಹೊಸ ಪರ್ವ! ಯುವರಾಜ್‌ಕುಮಾರ್‌ಗೆ ಹೊಂಬಾಳೆ ಫಿಲ್ಮ್ಸ್ ಮುನ್ನುಡಿ!?


ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ‘ಬಯಲುಸೀಮೆ’ ಸಿನಿಮಾ  ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ  ಮೂಡಿ‌ಬಂದಿದೆ.


[[{"fid":"237301","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]


ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದಲ್ಲಿ ಮೂಡಿಬಂದಿರುವ ಬಯಲುಸೀಮೆಯನ್ನು ವರುಣ್ ಕಟ್ಟೀಮನಿ ನಿರ್ದೇಶನ ಮಾಡಿದ್ದಾರೆ. ಎಂಭತ್ತರ ದಶಕ ಮತ್ತು ಇವತ್ತಿನ ಕಾಲಮಾನದೊಂದಿಗೆ ಜುಗಲ್ಬಂದಿ ಹೊಂದಿರೋ ಈ ಕಥೆ, ಆ ಎರಡು ಕಾಲಘಟ್ಟಗಳನ್ನೂ ಉತ್ತರ ಕರ್ನಾಟಕದ ಜವಾರಿ ಶೈಲಿಯಲ್ಲಿ ಕಟ್ಟಿಕೊಟ್ಟಿದೆ. ಸಾಹೂರಾವ್ ಶಿಂಧೆ ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲುಸೀಮೆಯ ಕಥೆ ಚಲಿಸುತ್ತೆ. ಆತನ ಸುತ್ತ ಹಬ್ಬಿಕೊಳ್ಳುವ ಅಕ್ರಮ ಸಂಬಂಧ, ಅದರ ಹಿನ್ನೆಲೆಯಲ್ಲೊಂದು ಲವ್ ಸ್ಟೋರಿ ಹಾಗೂ ಅದರ ಗರ್ಭದಲ್ಲಿಯೇ ಹುಟ್ಟಿಕೊಳ್ಳೋ ರಣ ದ್ವೇಷ... ಕ್ಷಣ ಕ್ಷಣವೂ ಪ್ರೇಕ್ಷಕರನ್ನು ತುದಿಗಾಲಿನ ಮೇಲೆ ತಂದು ಕೂರಿಸುವಂಥ ಗಟ್ಟಿ ಕಥೆಯೊಂದಿಗೆ ಚಿತ್ರತಂಡ ಪ್ರೇಕ್ಷಕರನ್ನು ಮುಖಾಮುಖಿಯಾಗೋ ಉತ್ಸಾಹದಲ್ಲಿದೆ.


ಇದನ್ನೂ ಓದಿ : ‘777 ಚಾರ್ಲಿ’ ಡಿಜಿಟಲ್‌ ರೈಟ್‌ ಪಡೆದ ಕಲರ್ಸ್‌ ಕನ್ನಡ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.