ಹುಬ್ಬಳ್ಳಿ : ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಮಸೂದೆ (Ordinance Replacement bill) ಸೇರಿದಂತೆ ಇತರ ಇಲಾಖೆಗಳ ಹಲವಾರು ಮಸೂದೆಗಳನ್ನು ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಗಡಿವಿಚಾರದ ಬಗ್ಗೆ ಬೆಳಗಾವಿಯಲ್ಲಿ ಎಂಇಎಸ್ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂಇಎಸ್ ಕಳೆದ 50 ವರ್ಷಗಳಿಂದ ಪುಂಡಾಟಿಕೆಯಲ್ಲಿ ತೊಡಗಿದೆ. ಅವರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರಕ್ಕೆ ತಿಳಿದಿದ್ದು, ಅವರ ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಇದನ್ನೂ ಓದಿ: Kantara : ಅದ್ಭುತ, ಪದಗಳೇ ಸಾಲುತ್ತಿಲ್ಲ, ಹ್ಯಾಟ್ಸ್ ಆಫ್ ಯೂ ರಿಷಬ್ ಸರ್..! ಕಾಂತಾರ ಮೆಚ್ಚಿದ ಜಾನ್ವಿ
ಬಾಂಬ್ ಪ್ರಕರಣಕ್ಕೆ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯನವರ ಹೇಳಿಕೆಗೆ ಉತ್ತರ ನೀಡಿ, ಅದೊಂದು ಆಕಸ್ಮಿಕ ಘಟನೆ ಎಂದು ಸಿದ್ಧರಾಮಯ್ಯನವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಪೂರ್ಣವಾಗಿ ಅರ್ಥೈಸಿಕೊಂಡು ನಂತರ ಪ್ರತಿಕ್ರಿಯೆ ನೀಡಿದರೆ ಸಿದ್ದರಾಮಯ್ಯನವರ ಸ್ಥಾನಕ್ಕೆ ಘನತೆ ಇರುತ್ತದೆ ಎಂದು ಗುಡುಗಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.