ಡ್ರಗ್ಸ್ ಜಾಲದ ಬಗ್ಗೆ ಇಂದು ಮತ್ತೆ ಇಂದ್ರಜಿತ್ ಲಂಕೇಶ್ ವಿಚಾರಣೆ; ಇವತ್ತಾದರೂ ಸಂಪೂರ್ಣ ಮಾಹಿತಿ ಕೊಡುವರೇ?
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಬಳಕೆ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಕಳೆದ ಸೋಮವಾರದ ವಿಚಾರಣೆ ವೇಳೆ ಇಂದ್ರಜಿತ್ ಲಂಕೇಶ್ ಕೊಟ್ಟಿರುವ ಮಾಹಿತಿ ಮತ್ತು ದಾಖಲೆಗಳು ಸಮರ್ಪಕವಾಗಿಲ್ಲ ಎಂದು ಇಂದು ಮತ್ತೊಮ್ಮೆ ವಿಚಾರಣೆಗೆ ಕರೆದಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ (Drugs Mafia) ಕನ್ನಡ ಚಿತ್ರರಂಗ ನಟ-ನಟಿಯರು ಭಾಗಿಯಾಗಿದ್ದಾರೆಂದು ಬಹಿರಂಗವಾಗಿ ಹೇಳಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajith Lankesh) ಅವರನ್ನು ಇಂದು ಮತ್ತೊಮ್ಮೆ ಸಿಸಿಬಿ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಬಳಕೆ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಕಳೆದ ಸೋಮವಾರದ ವಿಚಾರಣೆ ವೇಳೆ ಇಂದ್ರಜಿತ್ ಲಂಕೇಶ್ ಕೊಟ್ಟಿರುವ ಮಾಹಿತಿ ಮತ್ತು ದಾಖಲೆಗಳು ಸಮರ್ಪಕವಾಗಿಲ್ಲ ಎಂದು ಇಂದು ಮತ್ತೊಮ್ಮೆ ವಿಚಾರಣೆಗೆ ಕರೆದಿದ್ದಾರೆ. ಇಂದು ಸಂಪೂರ್ಣ ದಾಖಲೆಗಳ ಸಮೇತ ಬರುವಂತೆ ಸಿಸಿಬಿ ಅಧಿಕಾರಿಗಳು ಇಂದ್ರಜಿತ್ ಲಂಕೇಶದ ಅವರಿಗೆ ನೊಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯ ಹಿನ್ನಲೆ: ಇಂದು ನಟಿ ರಾಗಿಣಿ ವಿಚಾರಣೆ, ಮತ್ಯಾರಿಗೆ ಕಾದಿದೆಯೋ ಕಂಟಕ?
ಇಂದು ಬೆಳಿಗ್ಗೆ 11.30ಕ್ಕೆ ಸಿಸಿಬಿ ಕಚೇರಿಯಲ್ಲಿ ಇಂದ್ರಜಿತ್ ಲಂಕೇಶ್ ವಿಚಾರಣೆಗೆ ಹಾಜರಾಗಲಿದ್ದು ಡಿಸಿಪಿ ರವಿಕುಮಾರ್ , ಎಸಿಪಿ ಜಗನ್ನಾಥ್ ರೈ ಹಾಗೂ ಇನ್ಸ್ ಪೆಕ್ಟರ್ ಬೊಳೆತ್ತಿನ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಕಳೆದ ಬಾರಿಯ ವಿಚಾರಣೆ ವೇಳೆ ಇಂದ್ರಜಿತ್ ಲಂಕೇಶ್ ಸ್ಯಾಂಡಲ್ ವುಡ್ ನ 15 ಮಂದಿ ನಟ-ನಟಿಯರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿ ನೀಡಿದ್ದರು. ಇವತ್ತು ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸುತ್ತಾರಾ ಎಂಬುದನ್ನು ಕಾದುನೋಡಬೇಕು.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಹಿನ್ನಲೆಯಲ್ಲಿ 15 ನಟ-ನಟಿಯರಿಗೆ ಸಿಸಿಬಿ ನೊಟೀಸ್ ಸಾಧ್ಯತೆ
ಇಂದ್ರಜಿತ್ ಲಂಕೇಶ್ ಹೇಳಿಕೆಗಳನ್ನು ಆಧರಿಸಿ 15 ಮಂದಿ ನಟ-ನಟಿಯರ ಹಿನ್ನೆಲೆಗಳನ್ನು ಕಲೆ ಹಾಕಲಾಗುತ್ತಿದೆ. ಮಾಹಿತಿಗಳು ಸಂಪೂರ್ಣವಾಗಿ ತಿಳಿದುಬಂದ ಬಳಿಕ ನಟ-ನಟಿಯರಿಗೂ ನೊಟೀಸ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಈಗಾಗಲೇ ನಟಿ ರಾಗಿಣಿ ಮತ್ತು ಆಕೆಯ ಸ್ನೇಹಿತ ರವಿಶಂಕರ್ ಗೆ ನೋಟೀಸ್ ನೀಡಲಾಗಿದೆ. ಇವತ್ತು ಇಂದ್ರಜಿತ್ ಲಂಕೇಶ್ ದಾಖಲೆ ಒದಗಿಸಿದರೆ ಇನ್ನೊಂದಷ್ಟು ಮಂದಿ ನಟ-ನಟಿಯರು ಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ.