ಕನ್ನಡ ನಟಿ ಪ್ರಣೀತಾ, ನಟ ಪ್ರಕಾಶ್‌ ರಾಜ್‌ ವಿರುದ್ಧ ಕೇಸ್‌! ಕಾರಣವೇನು ಗೊತ್ತಾ?

Betting Apps Promotion Case: ರಮ್ಮಿ ಸೇರಿದಂತೆ ವಿವಿಧ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡುವ ಮೂಲಕ ಅಮಾಯಕರ ಹಣವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದ ಸೆಲೆಬ್ರಿಟಿಗಳ ವಿರುದ್ಧ ಸೈಬರಾಬಾದ್ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಸೈಬರಾಬಾದ್ ಕಮಿಷನರೇಟ್ ವ್ಯಾಪ್ತಿಯ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಹಲವಾರು ನಟರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

Written by - Bhavishya Shetty | Last Updated : Mar 20, 2025, 07:37 PM IST
    • ದಾರಿ ತಪ್ಪಿಸಬಹುದು ಎಂಬುದರ ಬಗ್ಗೆ ಆಲೋಚನೆಯೇ ಮಾಡುವುದಿಲ್ಲ
    • ಸೈಬರಾಬಾದ್ ಕಮಿಷನರೇಟ್ ವ್ಯಾಪ್ತಿಯ ಮಿಯಾಪುರ ಪೊಲೀಸ್ ಠಾಣೆ
    • ಹಲವಾರು ನಟರ ವಿರುದ್ಧ ಪ್ರಕರಣಗಳು ದಾಖಲಾಗಿವೆ
ಕನ್ನಡ ನಟಿ ಪ್ರಣೀತಾ, ನಟ ಪ್ರಕಾಶ್‌ ರಾಜ್‌ ವಿರುದ್ಧ ಕೇಸ್‌! ಕಾರಣವೇನು ಗೊತ್ತಾ?
Betting Apps Promotion Case

Betting Apps Promotion Case: ಕೆಲವೊಂದಿಷ್ಟು ಸೆಲೆಬ್ರಿಟಿಗಳು ಹಣ ಸಂಪಾದಿಸುವ ಉದ್ದೇಶವನ್ನಷ್ಟೇ ಇಟ್ಟುಕೊಂಡಿರುತ್ತಾರೆ. ಆದರೆ ಯಾವ ವಿಚಾರವನ್ನು ಹೇಳಿದರೆ ಜನರು ಸರಿದಾರಿಗೆ ಸಾಗುತ್ತಾರೆ, ಯಾವ ವಿಷಯಗಳು ಅವರ ದಾರಿ ತಪ್ಪಿಸಬಹುದು ಎಂಬುದರ ಬಗ್ಗೆ ಆಲೋಚನೆಯೇ ಮಾಡುವುದಿಲ್ಲ. ಸೆಲೆಬ್ರಿಟಿಗಳು ಇಂತಹ ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಹೊರೆಯಾಗುತ್ತಿದೆ.

Add Zee News as a Preferred Source

ಇದನ್ನೂ ಓದಿ: ಗ್ಯಾಸ್ಕೆಟ್ ಲೂಸ್ ಆಗಿ ನೀರೆಲ್ಲಾ ಚೆಲ್ಲುತ್ತಿದ್ದರೆ ಈ ಟ್ರಿಕ್ ಬಳಸಿ !ಎರಡೇ ನಿಮಿಷದಲ್ಲಿ ರಬ್ಬರ್ ಬಿಗಿಯಾಗಿ ಸಿಳ್ಳೆ ಹೊಡೆಯುತ್ತದೆ ಕುಕ್ಕರ್ !

ಇದೀಗ, ರಮ್ಮಿ ಸೇರಿದಂತೆ ವಿವಿಧ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡುವ ಮೂಲಕ ಅಮಾಯಕರ ಹಣವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದ ಸೆಲೆಬ್ರಿಟಿಗಳ ವಿರುದ್ಧ ಸೈಬರಾಬಾದ್ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಸೈಬರಾಬಾದ್ ಕಮಿಷನರೇಟ್ ವ್ಯಾಪ್ತಿಯ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಹಲವಾರು ನಟರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಪ್ರಣೀತಾ, ಲಕ್ಷ್ಮಿ ಮಂಚು, ನಿಧಿ ಅಗರ್ವಾಲ್, ಅನನ್ಯ ನಾಗೆಲ್ಲ, ಸಿರಿ ಹನುಮಂತು, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಬಾ ಪಟ್ಟಾನಿ, ಪವನ್ ಪಟ್ಟಾನಿ, ಪವನ್ ಶೆಟ್ಟಿ ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಬಯ್ಯ ಸನ್ನಿ ಯಾದವ್, ಶ್ಯಾಮಲಾ, ಟೇಸ್ಟಿ ತೇಜಾ, ರಿತು ಚೌಧರಿ ಮತ್ತು ಬಂಡಾರು ಶೇಷಾಯನಿ ಸುಪ್ರಿತಾ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುವ ಪ್ರಭಾವಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ತೆಲುಗು ಮತ್ತು ಹಿಂದಿ ನಟರು ಸೇರಿದಂತೆ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ಇದನ್ನೂ ಓದಿ: ಗೋರಂಟಿ ಅಲ್ಲ.. ಮೊಸರಿಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿದರೆ ಬಿಳಿ ಕೂದಲು 2 ನಿಮಿಷದಲ್ಲೇ ಕಪ್ಪಾಗುವುದು!

ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಪ್ರಕರಣದಲ್ಲಿ ನಿರೂಪಕಿ ವಿಷ್ಣು ಪ್ರಿಯಾ ಇಂದು ಪಂಜಗುಟ್ಟ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಇನ್ನೂ ಆರು ಜನರಿಗೆ ಪಂಜಗುಟ್ಟ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಿರೂಪಕಿಯರಾದ ಶ್ಯಾಮಲಾ, ರಿತು ಚೌಧರಿ, ಸುಪ್ರೀತಾ, ಸನ್ನಿ, ಸುಧೀರ್ ಮತ್ತು ಅಜಯ್ ಸನ್ನಿ ಅವರಿಗೆ ನೋಟಿಸ್ ನೀಡಲಾಗಿದೆ. ಇಂದು (ಗುರುವಾರ) ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ಗಳಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಕಾನ್‌ಸ್ಟೆಬಲ್ ಕಿರಣ್ ಗೌಡ್ ವಿಚಾರಣೆಗೆ ಹಾಜರಾಗಿದ್ದರು. ಆಸಿಫ್‌ನಗರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿರುವ ಕಿರಣ್ ಗೌಡ್, ಯೂಟ್ಯೂಬರ್ ಇಮ್ರಾನ್ ಖಾನ್ ಅವರೊಂದಿಗೆ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದರು. ಇದರೊಂದಿಗೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಪೊಲೀಸರು ನೀಡುವ ನೋಟಿಸ್‌ಗಳಿಗೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ಎಚ್ಚರಿಸಲಾಗಿದೆ. ವಿಚಾರಣೆಗೆ ಯಾರು ಬರುತ್ತಾರೆ, ಯಾರನ್ನು ಸುಮ್ಮನಾಗಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News