ಬೆಂಗಳೂರು: ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ 2 ಹಾಡುಗಳ, 4 ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Sriniddhi Shetty: ಫ್ಯಾರಿಸ್‌ನಲ್ಲಿ ಮಿಂಚುತ್ತಿರುವ ಕೆಜಿಎಫ್‌ ಚೆಲುವೆ...ಪೋಟೋಸ್‌ ನೋಡಿ


ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.


ಇದನ್ನೂ ಓದಿ: Bigg Boss Kannada Season 10: ಅ.8ರಿಂದ ಬಿಗ್‌ಬಾಸ್ ಕನ್ನಡ, 24 ಗಂಟೆಯೂ ಮನರಂಜನೆ


ಪ್ರದೀಪ್ ವರ್ಮಾ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ, ಮೋಹನ್ ರಾಸು ಸಹ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ "ಭಗೀರಥ" ಚಿತ್ರಕ್ಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.