ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಹೊಸಕೆರೆಹಳ್ಳಿಯ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15 ರಂದು ಬಿಡುಗಡೆಯಾಗುತ್ತಿದೆ. 1996 ರಲ್ಲಿ ಶಿವಣ್ಣ ಅಭಿನಯದ ಸೂಪರ್ ಹಿಟ್ ಚಿತ್ರ "ಜನುಮದ ಜೋಡಿ" ಕೂಡ ನವೆಂಬರ್ 15 ರಂದು ನರ್ತಕಿ ಚಿತ್ರಮಂದಿರದಲ್ಲೇ ಬಿಡುಗಡೆಯಾಗಿತ್ತು. ಈಗ "ಭೈರತಿ ರಣಗಲ್" ಚಿತ್ರ ಕೂಡ ಅದೇ ದಿನ ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.


COMMERCIAL BREAK
SCROLL TO CONTINUE READING

ಡಾಲಿ ಧನಂಜಯ, ನೀನಾಸಂ ಸತೀಶ್, ವಿಜಯ ರಾಘವೇಂದ್ರ, ಸುಧಾರಾಣಿ, ಶೃತಿ, ರಕ್ಷಿತಾ ಪ್ರೇಮ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಮಾಜಿ‌ ಅಧ್ಯಕ್ಷರಾದ ಸಾ ರಾ ಗೋವಿಂದು, ನಿರ್ಮಾಪಕರಾದ ಸೂರಪ್ಪ ಬಾಬು, ಕೆ.ಪಿ.ಶ್ರೀಕಾಂತ್, ನಿರ್ದೇಶಕರಾದ ಬಹದ್ದೂರ್ ಚೇತನ್, ಪವನ್ ಒಡೆಯರ್ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವಾರು ಗಣ್ಯರು ಈ ಸುಂದರ ಸಮಾರಂಭಕ್ಕೆ ಆಗಮಿಸಿ, ತಮ್ಮ ಪ್ರೀತಿ ತುಂಬಿದ ಮಾತುಗಳಿಂದ "ಭೈರತಿ ರಣಗಲ್" ಗೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಮಾತನಾಡಿದರು.


ಇದನ್ನೂ ಓದಿ: ಕೊನೆಗೂ ನಟಿ ತ್ರಿಷಾ ಮದುವೆ ಫಿಕ್ಸ್.. ʼಈʼ ಖ್ಯಾತ ನಿರ್ಮಾಪಕನ ಕೈ ಹಿಡಿಯಲಿರುವ ಸೌತ್‌ ಬ್ಯೂಟಿ!?


"ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರವನ್ನು ತಾವು ಮೆಚ್ಚಿಕೊಂಡು ಯಶಸ್ವಿ ಮಾಡಿದ್ದೀರಿ ಎಂದು ಮಾತನಾಡಿದ ನಾಯಕ ಶಿವರಾಜಕುಮಾರ್, "ಮಫ್ತಿ" ಚಿತ್ರದ ಪ್ರೀಕ್ವೇಲ್ ಈ "ಭೈರತಿ ರಣಗಲ್". ನಿರ್ದೇಶಕ ನರ್ತನ್ ತುಂಬಾ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಅಷ್ಟೇ ಚೆನ್ನಾಗಿ ನಿರ್ದೇಶನವನ್ನು ಮಾಡಿದ್ದಾರೆ. "ಭೈರತಿ ರಣಗಲ್" ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗುತ್ತಾನೆ. ನಮ್ಮ ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ ಎರಡನೇ ಚಿತ್ರವಿದು. ಅನುಭವಿ ತಂತ್ರಜ್ಞರ ಹಾಗೂ ಕಲಾವಿದರ ಸಮಾಗಮದಲ್ಲಿ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ನವೆಂಬರ್ 15ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಇಪ್ಪತ್ತೆಂಟು ವರ್ಷಗಳ ಹಿಂದೆ ನವೆಂಬರ್ 15 ರಂದೇ ನನ್ನ ಜನುಮದ ಜೋಡಿ ಚಿತ್ರ ನರ್ತಕಿ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಅದರ ನಿರ್ದೇಶಕರು ನಾಗಾಭರಣ. ಈ ಚಿತ್ರ ಕೂಡ ನವೆಂಬರ್ 15 ರಂದು ನರ್ತಕಿ ಚಿತ್ರಮಂದಿರದಲ್ಲೇ ಬಿಡುಗಡೆಯಾಗುತ್ತಿದೆ. ಇದರ ನಿರ್ದೇಶಕರು ನರ್ತನ್. ಎರಡು ಚಿತ್ರಗಳಲ್ಲೂ ನ ನ ಇದೆ. ಇದು ಕಾಕತಾಳೀಯ. ಆ ಚಿತ್ರದ ನಿರ್ಮಾಪಕರು ನನ್ನ ಅಮ್ಮ. ಈ ಚಿತ್ರದ ನಿರ್ಮಾಪಕರು ನನ್ನ ಹೆಂಡತಿ ಎಂದರು.


ನಿರ್ದೇಶಕ ನರ್ತನ್ ಹಾಗೂ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಚಿತ್ರವನ್ನು ನೋಡಿ ಪ್ರೋತ್ಸಾಹಿಸುವಂತೆ ಪ್ರೇಕ್ಷಕರಲ್ಲಿ ಮನವಿ ಮಾಡಿದರು. ನಾಯಕಿ ರುಕ್ಮಿಣಿ ವಸಂತ್, ನಟಿ ಛಾಯಾಸಿಂಗ್, ಚಿತ್ರದಲ್ಲಿ ಅಭಿನಯಿಸಿರುವ ಅವಿನಾಶ್, ಬಾಬು ಹಿರಣಯ್ಯ, ಗೋಪಾಲಕೃಷ್ಣ ದೇಶಪಾಂಡೆ, ಮಧು ಗುರುಸ್ವಾಮಿ, ಡ್ಯಾನ್ಸಿಂಗ್ ರೋಸ್ ಶಬೀರ್, ಪ್ರತಾಪ್ ಮುಂತಾದ ಕಲಾವಿದರು, ಸಂಗೀತ ನಿರ್ದೇಶಕ ರವಿ ಬಸ್ರೂರ್, ಛಾಯಾಗ್ರಾಹಕ ನವೀನ್ ಕುಮಾರ್ ಸೇರಿದಂತೆ ಮುಂತಾದ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.


ಇದನ್ನೂ ಓದಿ: 46ನೇ ವಯಸ್ಸಿನಲ್ಲಿ ಸ್ಟಾರ್‌ ನಟಿ ಜೊತೆ 2ನೇ ಮದುವೆಯಾದ ಖ್ಯಾತ ನಟ.! ಇವರ ಅಜ್ಜಿ ಕನ್ನಡದ ಫೇಮಸ್‌ ಹಿನ್ನೆಲೆ ಗಾಯಕಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.