ಭೀಮ ಚೆಲುವೆ ಪ್ರಕೃತಿ ಸೌಂದರ್ಯಗೆ ಬಿಗ್ ಪ್ರಾಜೆಕ್ಟ್ ನಲ್ಲಿ ಅವಕಾಶ
ದುನಿಯಾ ವಿಜಯ್ ನಿರ್ದೇಶನದ ಭೀಮ ಚಿತ್ರದಲ್ಲಿ ಡ್ರಾಗನ್ ಮಂಜು ಪತ್ನಿಯಾಗಿ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದ ಇವರ ಪಾತ್ರ ಎಲ್ಲರ ಗಮನ ಸೆಳೆದಿತ್ತು.
ಕನ್ನಡ ಚಿತ್ರರಂಗದಲ್ಲಿ ಇದೀಗ ಸಾಕಷ್ಟು ಹೊಸ, ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಹಾಗೆ ಬಂದವರಲ್ಲಿ ಸರಳ ಸೌಂರ್ಯವತಿಯಾದ ಪ್ರಕೃತಿ ಸೌಂದರ್ಯ ಕೂಡ ಒಬ್ಬರು. ದುನಿಯಾ ವಿಜಯ್ ನಿರ್ದೇಶನದ ಭೀಮ ಚಿತ್ರದಲ್ಲಿ ಡ್ರಾಗನ್ ಮಂಜು ಪತ್ನಿಯಾಗಿ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದ ಇವರ ಪಾತ್ರ ಎಲ್ಲರ ಗಮನ ಸೆಳೆದಿತ್ತು.
ಮೂಲತಃ ತುಮಕೂರಿನವರಾದ ಪ್ರಕೃತಿ ಸೌಂದರ್ಯ ಚಿಕ್ಕಂದಿನಿಂದಲೇ ಕಲೆಯ ನಂಟು ಬೆಳೆಸಿಕೊಂಡವರು. ಇವರ ತಾತ ಕೂಡ ರಂಗಭೂಮಿ ಕಲಾವಿದರಾಗಿ ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ಕಾಲೇಜು ದಿನಗಳಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿದ್ದ ಪ್ರಕೃತಿ ಸೌಂದರ್ಯಗೆ ಸ್ನೇಹಿತೆಯರೆಲ್ಲ ನೀನು ಚೆನ್ನಾಗಿದ್ದೀಯ, ಹಾಡುವುದಕ್ಕಿಂತ ಆ್ಯಕ್ಟಿಂಗ್ ಮಾಡಿದರೆ ಚೆನ್ನಾಗಿರುತ್ತೆ ಎಂದು ಸಲಹೆ ನೀಡಿದರಂತೆ. ಆ ಮಾತನ್ನೇ ಆಳವಾಗಿ ತೆಗೆದುಕೊಂಡ ಪ್ರಕೃತಿ ನಾನು ಕಲಾವಿದೆಯಾಗಿ ಬೆಳೆಯಬೇಕು ಎಂದು ಕನಸು ಕಟ್ಟಿಕೊಂಡಿದ್ದಾರೆ.
ಇದನ್ನೂ ಓದಿ: ಜನವರಿ 10ರಂದು ಶರಣ್ ಅಭಿನಯದ "ಛೂಮಂತರ್"
ನಂತರ ಸ್ನೇಹಿತರೊಬ್ಬರ ಸಹಾಯದಿಂದ ಕಿರುತೆರೆಯ ಗೀತಾ ಧಾರಾವಾಹಿಯಲ್ಲಿ ಸಣ್ಣದೊಂದು ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಆನಂತರ ಸಿಕ್ಕ ದೊಡ್ಡ ಅವಕಾಶವೇ ಕನ್ಯಾದಾನ. ಈ ಸೀರಿಯಲ್ ನ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡ ಪ್ರಕೃತಿ ಸೌಂದರ್ಯ ಅವರ ಪಾತ್ರ, ಅಭಿನಯ ಎಲ್ಲರ ಗಮನ ಸೆಳೆಯಿತು. ಅದಾದ ನಂತರ ದುನಿಯಾ ವಿಜಯ್ ಅವರು, ತಮ್ಮ ಭೀಮ ಚಿತ್ರದ ಪ್ರಮುಖ ಪಾತ್ರಕ್ಕೆ ಇವರೇ ಸೂಕ್ತ ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಭೀಮ ಚಿತ್ರದ ಪಾತ್ರ ನೋಡಿ, ತೆಲುಗು ಚಿತ್ರರಂಗದ ಕಡೆಯಿಂದಲೂ ಇವರಿಗೆ ಹಲವಾರು ಆಫರ್ ಗಳು ಬರುತ್ತಿವೆ.
ಈಗಾಗಲೇ ತೆಲುಗು ಸೀರಿಯಲ್ ಒಂದರಲ್ಲಿ ಕೂಡ ಪ್ರಕೃತಿ ಸೌಂದರ್ಯ ಅಭಿನಯಿಸಿದ್ದಾರೆ ಕೂಡ. ಸದ್ಯ ಕನ್ನಡದ ಬಿಗ್ ಪ್ರಾಜೆಕ್ಟ್ ವೊಂದರಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಅದರ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಹೇಳಿದ ಪ್ರಕೃತಿ ಸೌಂದರ್ಯ ಅವರಿಗೆ ತಾನು ಜನರು ಗುರುತಿಸುವಂಥ ಹಾಗೂ ಅಭಿನಯಕ್ಕೆ ಹೆಚ್ಚು ಅವಕಾಶ ಇರುವಂಥ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕೆಂಬ ಕನಸಿದೆ. ಇದೇ ತಿಂಗಳ 24ರಂದು ಪ್ರಕೃತಿ ಸೌಂದರ್ಯ ಅವರ ಹುಟ್ಟುಹಬ್ಬವಿದ್ದು ಇದೇ ಸಂದರ್ಭದಲ್ಲಿ ಹೊಸ ಚಿತ್ರಗಳ ಆಫರ್ ಬರುತ್ತಿರುವುದು ಅವರಿಗೆ ಡಬಲ್ ಖುಷಿ ನೀಡಿದೆ.
ಇದನ್ನೂ ಓದಿ: 42 ವರ್ಷದ ನಟನ ಜೊತೆ ಲಿಪ್‌ಕಿಸ್ ಸೀನ್‌ಗಾಗಿ 1 ಕೋಟಿ ಸಂಭಾವನೆ ಪಡೆದರಂತೆ ಈ ಸ್ಟಾರ್ ನಟಿ !?
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.