ಬೆಂಗಳೂರು: ಸಿನಿಮಾ ಕನಸುಗಳನ್ನು ಹೊತ್ತುಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು.ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್ ನಿರ್ಮಾಣಗೊಂಡಿದ್ದು, ಎಂ ಮುನೇಗೌಡ ಸಾರಥ್ಯದ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಚಿತ್ರ ಅನೌನ್ಸ್ ಆಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Vikrant Rona: ‘ವಿಕ್ರಾಂತ್ ರೋಣ‘ದಲ್ಲಿ ದ್ವಿಪಾತ್ರದಲ್ಲಿ ನಟಿಸಿದ್ದಾರಾ ಕಿಚ್ಚ? ಸುದೀಪ್‌ ಹೀರೋನಾ? ವಿಲನ್ನಾ!!


ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇವತ್ತು ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ಸಿನಿಮಾಗೆ ಭುವನಂ ಗಗನಂ ಎಂಬ ಟೈಟಲ್ ಇಡಲಾಗಿದ್ದು,  ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 


ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ನಟ ಪ್ರಮೋದ್, ಕ್ಲಾಸ್ ಲವ್ ಸ್ಟೋರಿ ಸಿನಿಮಾ ಹುಡುಕುತ್ತಿದ್ದೇ. ಈ ಕಥೆ ಕೇಳಿ ಏನೋ ಇಷ್ಟ ಆಗಿದೆ. ನಾನು ಈ ಸಿನಿಮಾದಲ್ಲಿ ಬೇರೆ ರೀತಿ ಕಾಣಿಸ್ತೇನೆ. ಇಡೀ ಸಿನಿಮಾ ನನಗೆ ಬೇರೆ ಮಜಲು ಕ್ರಿಯೇಟ್ ಮಾಡುತ್ತದೆ ಅನ್ನೋ ನಂಬಿಕೆ ಈ ಚಿತ್ರ ಒಪ್ಪಿಕೊಂಡಿದ್ದೇನೆ. ಈ ಅವಕಾಶ ಕೊಟ್ಟ ಎಲ್ಲರಿಗೂ ಧನ್ಯವಾದ. ಒಳ್ಳೆ ಸಿನಿಮಾವಾಗುತ್ತದೆ. ಎಲ್ಲರೂ ಸೇರಿ ಕೆಲಸ ಮಾಡೋಣಾ ಎಂದರು.


ಇದನ್ನೂ ಓದಿ : Maharashtra Political Crisis : ಉದ್ಧವ್ ಠಾಕ್ರೆಗೆ ಓಪನ್ ಚಾಲೆಂಜ್ ಹಾಕಿದ ಏಕನಾಥ್ ಶಿಂಧೆ!


ಪೃಥ್ವಿ ಅಂಬಾರ್, ಯಾವುದೇ ಸಿನಿಮಾವಾಗಲಿ ಫ್ಯಾಷನೇಟೇಡ್ ನಿರ್ಮಾಪಕರು, ನಿರ್ದೇಶಕರು ಬೇಕು. ಈ ಸಿನಿಮಾದಲ್ಲಿ ಎರಡು ಇದೆ. ನಿರ್ದೇಶಕರ ಜೊತೆ ಈ ಹಿಂದೆ ಕೆಲಸ ಮಾಡಿದ್ದೇನೆ. ನನಗೆ ಟೈಟಲ್ ಬಹಳ ಇಷ್ಟವಾಯ್ತು. ನನ ಹೆಸ್ರು ಅರ್ಥ ಕೂಡ ಭುವನಂ ಗಗನಂ. ಕಥೆ ಕೇಳಿದಾಗ ನನಗೆ ಬಹಳ ಕನೆಕ್ಟ್ ಆಗಿತ್ತು. ಪ್ರಮೋದ್ ಅದ್ಭುತ ಕಲಾವಿದ. ಇಡೀ ತಂಡದ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಖುಷಿ ಎಂದು ಅಭಿಪ್ರಾಯ ಹಂಚಿಕೊಂಡರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.