ಬೆಂಗಳೂರು: ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದ ಬಿಗ್ ಬಾಸ್ ಬ್ಯೂಟಿ ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟಿಸ್ತಿರುವ ಬಹುನಿರೀಕ್ಷಿತ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Divya Suresh: ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ..!


ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್


ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ (Divya Suresh) ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರು ಆತ್ಮೀಯ ಸ್ನೇಹಿತರು. ಇಬ್ಬರು ಒಟ್ಟಿಗೆ ನಟಿಸುವ ಅವಕಾಶ ಹಿರಣ್ಯ ಸಿನಿಮಾ ಮೂಲಕ ನನಸಾಗ್ತಿದೆ ಅನ್ನೋದು ಬಿಗ್ ಬಾಸ್ ಬ್ಯೂಟಿ ದಿವ್ಯಾ ಮಾತು. ಇದೇ 9 ರಿಂದ ದಿವ್ಯಾ ಸುರೇಶ್ ಭಾಗದ ಶೂಟಿಂಗ್ ಶುರುವಾಗ್ತಿದೆ.


Kichcha Sudeep: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕಿಚ್ಚ ಸುದೀಪ್ ಭೇಟಿ


ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿಘ್ನೇಶ್ವರ ಯು ಮತ್ತು ವಿಜಯ್ ಕುಮಾರ್ ಬಿವಿ ಹಿರಣ್ಯ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ.ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಇದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.