kannada actor darshan: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಾಯಕ ದರ್ಶನ್ ಗೆ ಪೊಲೀಸರು ಬಿಗ್ ಶಾಕ್ ನೀಡಲಿದ್ದಾರೆ ಎಂದು ವರದಿಯಾಗಿದೆ. ದರ್ಶನ್‌ಗೆ ಜಾಮೀನು ದೊರೆತ ಬಳಿಕ ಅಕ್ಟೋಬರ್ 30ರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖಾ ತಂಡದೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸದ್ಯದಲ್ಲೇ ದರ್ಶನ್ ಗೆ ಸಖತ್ ಶಾಕ್ ನೀಡಲು ಪೊಲೀಸರು ಮುಂದಾಗಿದ್ದಾರೆಯಂತೆ.


COMMERCIAL BREAK
SCROLL TO CONTINUE READING

ಇದರ ಭಾಗವಾಗಿ ದರ್ಶನ್ ಜಾಮೀನಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ.. 


ಇದಲ್ಲದೇ ನ.4ರಂದು ಮತ್ತೆ ಪೊಲೀಸ್ ಮೇಲಧಿಕಾರಿಗಳು ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಹೈಕೋರ್ಟ್ ಆದೇಶದ ವಿರುದ್ಧ ಪೊಲೀಸರು ಮೇಲ್ಮನವಿ ಸಲ್ಲಿಸಿದರೆ ದರ್ಶನ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.