Yuva Rajkumar Divorce Case: ನಟ ಯುವ ರಾಜಕುಮಾರ್ ತಮ್ಮ ಪತ್ನಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಪತ್ನಿಗೆ ಡಿವೋರ್ಸ್ ನೀಡುತ್ತಿರುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಯುವ ನೀಡಿದ್ದ ನೋಟಿಸ್ಗೆ ಶ್ರೀದೇವಿ ಸಹ ಉತ್ತರಿಸಿದ್ದರು. ಈ ಪ್ರಕರಣದ ವಿಚಾರಣೆ ಇಂದು ಗುರುವಾರ (ಜುಲೈ 04) ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಲಿದೆ.
ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ಅವರಿಗೆ ನೋಟಿಸ್ ನೀಡಿತ್ತು. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಶ್ರೀದೇವಿ ಬೈರಪ್ಪ, ನ್ಯಾಯಾಲಯದ ವಿಚಾರಣೆ ಪ್ರಯುಕ್ತ ಬುಧವಾರ ಬೆಂಗಳೂರಿಗೆ ಬಂದಿದ್ದರು.
ಇದನ್ನೂ ಓದಿ: ಶ್ರೀದೇವಿ ಬೈರಪ್ಪ ಪೋಸ್ಟ್ನಲ್ಲಿ ಏನಿದೆ?
ನಟ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಬೈರಪ್ಪ ಇಲ್ಲಿದ್ದಾಗ ಏನೆಲ್ಲಾ ಆಯ್ತು ಎಂದು ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ. ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘಟನೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.
ಇದನ್ನೂ ಓದಿ: ಪವಿತ್ರಾಗೌಡ ನಟ ದರ್ಶನ್ 2ನೇ ಪತ್ನಿಯಲ್ಲ: ಪೊಲೀಸ್ ಕಮಿಷನರ್ಗೆ ವಿಜಯಲಕ್ಷ್ಮೀ ಪತ್ರ!
ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾಗಿದ್ದು ತೀರ ದುರದೃಷ್ಟಕರ. ಆದರೂ ಸಹ ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.
ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಅಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದು:ಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.
ಹಾರ್ವರ್ಡ್ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಾಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಅಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ ಎಂದು ಬರೆದು ತಮ್ಮ ಇನ್ಸ್ಟಾಗ್ರಾಮ್ಸ್ಟೋರಿಯಲ್ಲಿ ಶ್ರೀದೇವಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ದರ್ಶನ್ ಬೇಸರ... ಆಕೆಯ ಸಹವಾಸ ಸಾಕೆಂದ ʻದಾಸʼ.! ಟೆನ್ಷನ್ನಲ್ಲಿ ಇರೋದೇಕೆ ಪವಿತ್ರಾ ಗೌಡ!
ಯುವ ಪತ್ನಿ ಶ್ರೀದೇವಿ ಈ ನಡುವೆ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಇಂದೇ ವಿದೇಶಕ್ಕೆ ವಾಪಸ್ ತೆರಳಲಿದ್ದಾರೆ. ಶ್ರೀದೇವಿ ಬೈರಪ್ಪ ಮತ್ತು ಯುವ ಇಬ್ಬರನ್ನೂ ಒಂದು ಮಾಡುವ ಯತ್ನ ಶಿವಣ್ಣ ಮಾಡಬಹುದು ಎಂದು ಫ್ಯಾನ್ಸ್ ನಿರೀಕ್ಷಿಸಿದ್ದಾರೆ. ಆದರೆ ಇದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.