Girki: ‘ಗಿರ್ಕಿ’ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಸೆಂಚುರಿ ಸ್ಟಾರ್ ಶಿವಣ್ಣ

‘ಬಿಗ್ ಬಾಸ್’ ಖ್ಯಾತಿಯ ದಿವ್ಯ ಉರುಡುಗ ನಟನೆಯ ಈ ಸಿನಿಮಾದ ಟೀಸರ್ ಶೀಘ್ರವೇ ಬಿಡುಗಡೆಯಾಗಲಿದ್ದು, ಮೇ ತಿಂಗಳಿನಲ್ಲಿ ಚಿತ್ರ ತೆರೆಗೆ ಬರಲಿದೆ.

Written by - YASHODHA POOJARI | Edited by - Puttaraj K Alur | Last Updated : Apr 2, 2022, 05:22 PM IST
  • ‘ಗಿರ್ಕಿ’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ
  • ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ ನಟಿಸಿರುವ ಸಿನಿಮಾ
  • ‘ಗಿರ್ಕಿ’ ಚಿತ್ರಕ್ಕೆ ಶುಭ ಹಾರೈಸಿದ ‘ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್
Girki: ‘ಗಿರ್ಕಿ’ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಸೆಂಚುರಿ ಸ್ಟಾರ್ ಶಿವಣ್ಣ   title=
‘ಗಿರ್ಕಿ’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್

ಬೆಂಗಳೂರು: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರದ ಮೋಷನ್ ಪೋಸ್ಟರ(Girki Motion Poster)ನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್(Shivarajkumar) ಇತ್ತೀಚೆಗೆ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಬಿಗ್ ಬಾಸ್’ ಖ್ಯಾತಿಯ ದಿವ್ಯ ಉರುಡುಗ(Divya Uruduga) ನಟನೆಯ ಈ ಸಿನಿಮಾದ ಟೀಸರ್ ಶೀಘ್ರವೇ ಬಿಡುಗಡೆಯಾಗಲಿದ್ದು, ಮೇ ತಿಂಗಳಿನಲ್ಲಿ ಚಿತ್ರ ತೆರೆಗೆ ಬರಲಿದೆ. ಲವ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ.ಎಂ ನಿರ್ದೇಶಿಸಿದ್ದು, ಕಥೆ-ಚಿತ್ರಕಥೆ ಹಾಗೂ ಸಂಭಾಷಣೆಯನ್ನೂ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ. 

ಇದನ್ನೂ ಓದಿ: 'ವಿಕ್ರಾಂತ್‌ ರೋಣ' ಟೀಸರ್‌ ರಿಲೀಸ್..!‌ ಮುಗಿಲು ಮುಟ್ಟಿದ ಸುದೀಪ್‌ ಅಭಿಮಾನಿಗಳ ಸಂಭ್ರಮ..!

ವಾಸುಕಿ ಭುವನ್(Vasuki Bhuvan) ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ(Taranga Vishwa) ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ: Vikrant Rona: ಜುಲೈ 28ಕ್ಕೆ ಜಗತ್ತಿನಾದ್ಯಂತ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News